ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲಾದ್ಯಂತ ಮಡಿವಾಳ ಮಾಚಿದೇವ ಜಯಂತಿ

ಜಿಲ್ಲಾಡಳಿತದ ವತಿಯಿಂದ ಸರಳ ಕಾರ್ಯಕ್ರಮ; ಮಾಚಿದೇವರ ಕೊಡುಗೆ ಸ್ಮರಣೆ
Last Updated 1 ಫೆಬ್ರುವರಿ 2021, 16:39 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ವಿವಿಧ ಕಡೆ ಮಡಿವಾಳ ಮಾಚಿದೇವರ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರ ಕೊಡುಗೆಯನ್ನು ಗಣ್ಯರು ಸ್ಮರಿಸಿದರು.

ಜಿಲ್ಲಾಡಳಿತ: ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ತ್ಯಾಗ ಸ್ಮರಣೀಯ ಎಂದು ಅಭಿಪ್ರಾಯಪಟ್ಟರು.

ಸಮಾನತೆ, ಜಾತಿಯತೆಯ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯಕ್ಕೆ ಮನ್ನಣೆ, ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಹಾಗೂ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಬಿಜಾಸಪುರ, ಸಮಾಜದ ಮುಖಂಡರಾದ ನಾಗಪ್ಪ ಮೊಗ್ದಂಪುರ, ಮಹಾದೇವಪ್ಪ ಯಲಸತ್ತಿ, ಶ್ರೀಶೈಲ ಗುತ್ತೇದಾರ, ಸಾಬು ಮಡಿವಾಳ, ಮರೆಪ್ಪ, ಚನ್ನಪ್ಪ, ದೇವಿಂದ್ರಪ್ಪ ಸಲಿಕೇರಿ, ನಾಗಪ್ಪ ದುರುಗಪ್ಪ, ಮಡಿವಾಳ ಮಾಚಿದೇವರ ಅನುಯಾಯಿಗಳು, ಅಭಿಮಾನಿಗಳು ಇದ್ದರು.

ಖಾನಾಪುರ: ಶಹಾಪುರ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ವೀರಗಂಟಿ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಮಡಿವಾಳ ಸಮಾಜದ ಪ್ರಮುಖ ಹಾಗೂ ಗ್ರಂಥಾಲಯ ಮೇಲ್ವಿಚಾರಕ ಯಂಕಪ್ಪ ಮಡಿವಾಳ ಪೂಜೆ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಅರುಣಕುಮಾರ ಹೊರಮನಿ, ರವಿ ಆಪರೇಟರ್, ನಿಂಗಪ್ಪ ದೇವರಹಳ್ಳಿ, ಬಾಲದಂಡಪ್ಪ, ಪದ್ಮಾಕರ್ ದುರ್ಗಪ್ಪ ಜಾಲಹಳ್ಳಿ, ಮಡಿವಾಳ ಸಮಾಜದ ಪ್ರಮುಖರಾದ ಹಣಮಂತ ಗುಂಡಳ್ಳಿ, ಸಾಬಣ್ಣ, ಸಿದ್ದಪ್ಪ, ಶರಣಪ್ಪ, ಬಸವರಾಜ್, ದೇವು ವಾಗಣಗೇರಿ, ಭೀವ್ಮರಾಯ, ಚೇತನ, ಸಾಬರೆಡ್ಡಿ, ರಾಜು, ಅಪ್ಪು, ಭೀಮು ದೊರೆ, ಗೂಳಪ್ಪ, ಭೀಮ ಕೃಷ್ಣಪ್ಪನೋರ್, ಸಾಬಣ್ಣ ಕಾಮಣ್ಣನೋರ್
ಇದ್ದರು.

ಕರವೇ ಕಾರ್ಯಾಲಯ: ನಗರದ ಕರವೇ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಲಾಯಿತು.

ನಂತರ ಮಾತಾನಾಡಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಸರ್ವರಿಗೂ ಸಮಪಾಲು, ಸಮಬಾಳು ಒದಗಿಸಲು ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದರು.

ಈ ವೇಳೆ ಜಿಲ್ಲಾ ಯುವ ಘಟಕ ಅಧ್ಯಕ್ಷ ವಿಶ್ವರಾಧ್ಯ ದಿಮ್ಮೆ, ನಗರಾಧ್ಯಕ್ಷ ಅಂಬ್ರೇಶ್ ಹತ್ತಿಮನಿ, ಸಿದ್ದು ನಾಯಕ ಹತ್ತಿಮನಿ, ಅಬ್ದುಲ್ ಅಜೀಜ್, ಸಾಬು ಹೊರುಂಚ, ವಿಜಯ ರಾಠೋಡ್, ಕಾಶಿನಾಥ್ ನಾನೇಕ್ ಇದ್ದರು.

***

ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು.
-ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT