ಶುಕ್ರವಾರ, ಆಗಸ್ಟ್ 19, 2022
27 °C

ಕೋವಿಡ್‌ನಿಂದ ಗುಣಮುಖರಾದ ಶಾಸಕ ಮುದ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸ್ಥಳೀಯ ಶಾಸಕ ವೆಂಕಟರಡ್ಡಿ ಮುದ್ನಾಳ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್‌ ದೃಢವಾಗಿತ್ತು. 

ಶಾಸಕರ ಭವನದಲ್ಲಿ ಶಾಸಕರನ್ನು ಭೇಟಿಯಾದ ಪಕ್ಷದ ಮುಖಂಡರಾದ ಮಹಾದೇವಪ್ಪ ಯಲಸತ್ತಿ, ಶರಣಗೌಡ ಬಾಡಿಯಾಳ, ನಗರಸಭಾ ಸದಸ್ಯ ವಿಲಾಸ ಪಾಟೀಲ ಮಾತುಕತೆ ನಡೆಸಿದರು.

ಈ ವೇಳೆ ಶಾಸಕ ಮುದ್ನಾಳ 2–3 ದಿನಗಳಲ್ಲಿ ಕ್ಷೇತ್ರಕ್ಕೆ ಆಗಮಿಸಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.