ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ
Last Updated 3 ಅಕ್ಟೋಬರ್ 2019, 15:39 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಅಕ್ಟೋಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿಅವರು ಮಾತನಾಡಿದರು.

ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಬೆಳಿಗ್ಗೆ 8.30 ಗಂಟೆಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸಬೇಕು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಪುಟಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಎಸ್.ಅಲ್ಲಾಬಕಷ, ಜಿಲ್ಲಾ ಪರಿಶಿಷ್ಟ ಪಂಗಡಗಳ ಅಧಿಕಾರಿ ಬಂದೇನವಾಜ ಗೇಸುದ್‍ರಾಜ್, ಪೌರಾಯುಕ್ತ ರಮೇಶ ಸುಣಗಾರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ್, ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ ಮಗದಂಪೂರ, ನಗರಸಭೆ ಸದಸ್ಯ ಮರೆಪ್ಪ ಚಟ್ಟೆರಕರ್, ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ, ಸಮಾಜದ ಮುಖಂಡರಾದ ಭೀಮರಾಯ ಠಾಣಗುಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT