ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹರ್ಷಿ ವಾಲ್ಮೀಕಿ ಜೀವನ ಆದರ್ಶ: ಜಿಲ್ಲಾಧಿಕಾರಿ

ಜಿಲ್ಲಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ
Last Updated 1 ನವೆಂಬರ್ 2020, 1:34 IST
ಅಕ್ಷರ ಗಾತ್ರ

ಯಾದಗಿರಿ: ‘ಆದಿಕವಿ ಮಹರ್ಷಿ ವಾಲ್ಮೀಕಿಯವರು ಒಂದು ಜಾತಿಗೆ ಸೀಮಿತವಲ್ಲ. ಅವರು ಇಡೀ ದೇಶದ ಎಲ್ಲಾ ಸಮುದಾಯಕ್ಕೆ ಬೇಕಾದವರು. ವಾಲ್ಮೀಕಿಯವರ ಜೀವನ ಪ್ರತಿಯೊಬ್ಬರಿಗೂ ಆದರ್ಶವಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣ ದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅಂಗವಾಗಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಪ್ರಾಚೀನ ಸಂಸ್ಕೃತಿಯನ್ನು ಹೊಂದಿ ರುವ ನಮ್ಮ ದೇಶದಲ್ಲಿ ಅನೇಕ ಋಷಿಗಳು, ಶರಣರು, ಸಂತರು ಜನಿಸಿದ್ದಾರೆ. ಅವರಲ್ಲಿ ಮಾನವ ಸಮು ದಾಯಕ್ಕೆ ಮಾರ್ಗದರ್ಶನ ನೀಡುವ ರಾಮಾಯಣ ಮಹಾಕಾವ್ಯ ವನ್ನು ರಚಿಸಿದ ಆದಿಕವಿ ವಾಲ್ಮೀಕಿಯವರು ಪ್ರಮುಖರಾಗಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರು ಮಹರ್ಷಿಗಳು ಎಂದು ಕರೆಸಿಕೊಂಡಿದ್ದಾರೆ’ ಎಂದರು.

‘ಮಹರ್ಷಿ ವಾಲ್ಮೀಕಿಯವರು ಪರಿಶ್ರಮದ ಮೂಲಕ ಸಾಧನೆ ಮಾಡಿದವರು. ಅವರ ಜೀವನದಲ್ಲಿನ ಸ್ಫೂರ್ತಿದಾಯಕವಾದ ಅಂಶಗಳನ್ನು ತಪ್ಪದೇ ಪಾಲಿಸಬೇಕು. ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಸಮಾಜಕ್ಕೆ ಒಳ್ಳೆಯದು ಮತ್ತು ಕೆಟ್ಟದುರ ಕುರಿತು ಮಾರ್ಗದರ್ಶನ ನೀಡುತ್ತದೆ’ ಎಂದು ಹೇಳಿದರು.

ವಿದ್ಯಾರ್ಥಿನಿಗೆ ಸನ್ಮಾನ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸೌಜನ್ಯ ಅಯ್ಯಣ್ಣ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಪ್ರತಿಜ್ಞಾ ವಿಧಿ: ಸರ್ದಾರ್ ವಲ್ಲಭಾಯಿ ಪಟೇಲ್‌ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವೆಂದು ಆಚರಣೆಯ ಮಾಡುವ ಸಲುವಾಗಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ವಿಧಿ ಮತ್ತು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ ರಾಷ್ಟ್ರೀಯ ಸಂಕಲ್ಪ ದಿವಸದ ಪ್ರತಿಜ್ಞೆ ವಿಧಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಬೋಧಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ ಸೋನವಣೆ, ಪ್ರೋಬೆಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಭು ದೊರೆ, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಮರೆಪ್ಪ ನಾಯಕ ಮಗದಂಪುರ, ಸಮಾಜದ ಮುಖಂಡ ಭೀಮುನಾಯಕ ಪಾಲ್ಗೊಂಡಿದ್ದರು.

***

ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಿಸಿದ ಮಾತ್ರಕ್ಕೆ ನಮ್ಮ ಜೀವನ ಸಾರ್ಥಕವಾಗುವುದಿಲ್ಲ. ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗಜಯಂತ್ಯುತ್ಸವಕ್ಕೆ ಅರ್ಥ ಬರುತ್ತದೆ

ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT