ಬುಧವಾರ, ಅಕ್ಟೋಬರ್ 21, 2020
26 °C
ಮಹಾತ್ಮ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಸರಳ ಆಚರಣೆ

ಗಾಂಧಿ, ಶಾಸ್ತ್ರಿ ಆಶಯ ಈಡೇರಿಸಿ: ಯಾದಗಿರಿ ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವುದು, ದೇವರಿಗೆ ಪ್ರಾರ್ಥನೆ ಮಾಡಿದಂತೆ ಎಂದು ಮಹಾತ್ಮ ಗಾಂಧೀಜಿ ಅಭಿಪ್ರಾಯವಾಗಿತ್ತು. ಇಂಥ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಭವ್ಯಭಾರತ ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸುಮಾರು 70 ದಶಕಗಳ ಹಿಂದೆ ಅಹಿಂಸಾ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಕೋವಿಡ್-19 ಸೋಂಕಿನ ವಿರುದ್ಧ ಹೋರಾಡಲು ನಾವೆಲ್ಲಾ ಸೇನಾನಿಗಳಾಗಬೇಕಾಗಿದೆ. ಹೀಗಾಗಿ ಪ್ರತಿಯೋಬ್ಬರೂ ಸ್ವಯಂ ಪ್ರೇರಿತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಕಿರಾಣಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಇದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಎಂದು ಹೇಳಿದರು.

ಮಾಸ್ಕ್ ಹಾಕಿಕೊಳ್ಳದೆ ಉಲ್ಲಂಘನೆ ಮಾಡಿದವರಿಗೆ ದಂಡವಿಧಿಸಲಾಗುವುದು ಎಂದು ನಗರಗಳಲ್ಲಿ ನಗರಸಭೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು. ಕೋವಿಡ್ ಸೋಂಕಿನ ಅಪಾಯದ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ, ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ಸೂಚಿಸಬೇಕು ಎಂದು ಹೇಳಿದರು.

ದೇಶದ ಮಾಜಿ ಪ್ರಧಾನಿಗಳಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮದಿನವೂ ಕೂಡ ಇಂದೇ ಆಗಿದೆ. ಅವರು ಪ್ರಧಾನಮಂತ್ರಿಗಳಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದರು. ಅವರ ಆಡಳಿತಾವಧಿಯಲ್ಲಿ ಅನೇಕ ದೃಢ ನಿರ್ಧಾರಗಳನ್ನು ಕೈಗೊಂಡು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ವಿಕ್ರಮ್‍ಸಿಂಗ್ ಸೇರಿದಂತೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು