ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಬಹುಮತ; ಯಾದಗಿರಿ ನಗರದಲ್ಲಿ ಬಿಜೆಪಿ ವಿಜಯೋತ್ಸವ

Last Updated 8 ಡಿಸೆಂಬರ್ 2022, 16:55 IST
ಅಕ್ಷರ ಗಾತ್ರ

ಯಾದಗಿರಿ: ಗುಜರಾತ್‌ನಲ್ಲಿ ಬಹುಮತ ಗಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತಿರುವುದನ್ನು ಸ್ವಾಗತಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮಾಡಿದರು.

ನಗರದ ಸುಭಾಷ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪರವಾಗಿ ಘೋಷಣೆಗಳನ್ನು ಮೊಳಗಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ಗುಜರಾತ್‌ನಲ್ಲಿ ಮತ್ತೊಮ್ಮೆ ಕಮನ ಅರಳಿದಿದ್ದು, ಕಾಂಗ್ರೆಸ್‌ ದೂಳಿಪಟವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ಜನರು ಮೆಚ್ಚಿ ಮತ ನೀಡಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು.

ಮಾಜಿ ಶಾಸಕ ಡಾ.ವಿರಬಸವಂತರಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ರಾಜ್ಯ ವಿಶೇಷ ಸದಸ್ಯೆ ನಾಗರತ್ನ ಕುಪ್ಪಿ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಲಲಿತಾ ಅನಪುರ, ನಗರಸಭೆ ಸದಸ್ಯ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಅಂಬಯ್ಯ ಶಾಬಾದಿ, ಶಿವರಾಜ ದಾಸನಕೇರಿ, ರಿಯಾಜ್‌ ಕಲ್ಲೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT