ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೇತ್ರದಾನ ಮಾಡಿ ಮತ್ತೊಬ್ಬರ ದೃಷ್ಟಿಗೆ ನೆರವಾಗಿ’

35ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕದಲ್ಲಿ ಡಾ. ಅನವಾರ ಸಲಹೆ
Last Updated 1 ಸೆಪ್ಟೆಂಬರ್ 2020, 8:21 IST
ಅಕ್ಷರ ಗಾತ್ರ

ಯಾದಗಿರಿ: ತಮ್ಮ ನೇತ್ರಗಳು ಸದಾ ಜೀವಂತವಾಗಿರಲು ನೇತ್ರದಾನ ಮಾಡಿ ಮತ್ತೊಬ್ಬರ ದೃಷ್ಟಿಗೆ ನೆರವಾಗಬೇಕು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಗವಂತ ಅನವಾರ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 35ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ-2020ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೇತ್ರದಾನ ಕಾರ್ಯಕ್ರಮವನ್ನು ರಾಷ್ಟ್ರದ್ಯಾದಂತ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷ ಸರಾಸರಿ 5,600 ನೇತ್ರದಾನಗಳಾಗುತ್ತಿವೆ. ಅಂದಾಜು 1.25 ಲಕ್ಷ ಜನರು ಕಾರ್ನಿಯಾ ಸಂಬಂಧ ಅಂಧತ್ವದಿಂದ ಬಳಲುತ್ತಿದ್ದು, ನೇತ್ರದಾನಕ್ಕಾಗಿ ಕಾಯುತ್ತಿರುತ್ತಾರೆ. ವಿಶ್ವದಾದ್ಯಂತ ಧಾರ್ಮಿಕ ನಾಯಕರು ನೇತ್ರದಾನಕ್ಕೆ ಬೆಂಬಲ ಸೂಚಿಸಿದ್ದು, ಅತ್ಯುತ್ತಮ ಮಾನವೀಯ ಸೇವೆ ಸಲ್ಲಿಸುತ್ತಿದ್ದಾರೆ. ಈ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ನೇತ್ರದಾನ ಮಾಡುವಂತೆ ಮನವೊಲಿಸುವದು ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಾಜೀದ್, ಟಿಎಚ್ಒ ಡಾ. ಹಣಮಂತರೆಡ್ಡಿ, ಡಾ. ಮಲ್ಲಪ್ಪ ಶಹಾಪುರ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ನಂದಣ್ಣ ಪಾಟೀಲ ನಿರೂಪಿಸಿ ಸ್ವಾಗತಿಸಿದರು. ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ತುಳಸಿರಾಮ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT