ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ನರೇಗಾ ವೈಯಕ್ತಿಕ ಕಾಮಗಾರಿ ಸದ್ಬಳಕೆ ಮಾಡಿಕೊಳ್ಳಿ’

Published : 24 ಸೆಪ್ಟೆಂಬರ್ 2024, 14:18 IST
Last Updated : 24 ಸೆಪ್ಟೆಂಬರ್ 2024, 14:18 IST
ಫಾಲೋ ಮಾಡಿ
Comments

ಕಮಲನಗರ: ‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಕೈಗೊಳ್ಳಲು ಅವಕಾಶವಿದ್ದು, ಅದನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಕಾರ್ಮಿಕರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್ ತಿಳಿಸಿದರು.

ತಾಲ್ಲೂಕಿನ ಹೋಳಸಮುದ್ರ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿ ಆಯೋಜಿಸಿದ್ದ ವೈಯಕ್ತಿಕ ಕಾಮಗಾರಿಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪ್ರತಿಗಳನ್ನು ವಿತರಿಸಿ ಮಾತನಾಡಿದರು.‌

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಬಚ್ಚಲು ಗುಂಡಿ, ಕೃಷಿ ಹೊಂಡ, ಕುರಿ, ಕೋಳಿ, ಹಂದಿ ಶೆಡ್ ನಿರ್ಮಾಣಕ್ಕೆ ಅವಕಾಶಗಳಿವೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಬಹುದಾಗಿದ್ದು, ಅರ್ಹ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಡಿಒ ನಿರ್ಮಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯೋಗಿತಾ ಮಾರುತಿ, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಐಇಸಿ ಸಂಯೋಜಕರು, ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT