ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಒಪಿ ಗಣೇಶ ಮೂರ್ತಿ ತಯಾರಿಕೆ ನಿಷೇಧ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

Last Updated 7 ಸೆಪ್ಟೆಂಬರ್ 2018, 12:52 IST
ಅಕ್ಷರ ಗಾತ್ರ

ಯಾದಗಿರಿ: ಗಣೇಶ ಹಬ್ಬದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ), ವಿಷಕಾರಿ ರಾಸಾಯನಿಕ ಹಾಗೂ ಲೋಹ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಆದೇಶಿಸಿದ್ದಾರೆ.

ಜಲ ಮಾಲಿನ್ಯ (ನಿವಾರಣಾ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33 (ಎ) ಪ್ರಕಾರ ಪಿಒಪಿ, ವಿಷಕಾರಿ ರಾಸಾಯನಿಕ ಹಾಗೂ ಲೋಹ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸಬಾರದು. ಜೇಡಿ ಮಣ್ಣಿನಿಂದ ಮಾತ್ರ ಮೂರ್ತಿಗಳನ್ನು ತಯಾರಿಸಬೇಕು ಎಂದಿದ್ದಾರೆ.

ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಮತ್ತು ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೇಡಿ ಮಣ್ಣಿನಿಂದ ಮತ್ತು ನೈಸರ್ಗಿಕ ಬಣ್ಣ ಲೇಪಿತ, ಎಲೆ ಹೂವುಗಳಿಂದ ತಯಾರಿಸಿದ ನೈಸರ್ಗಿಕ ಗಣೇಶ ಮೂರ್ತಿಗಳನ್ನು ಸ್ಥಾಪಿಸಬೇಕು. ಬಾವಿ, ಕೆರೆ, ಹೊಳೆ ಹಾಗೂ ನದಿಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬಾರದು. ಸ್ಥಳೀಯ ಸಂಸ್ಥೆಗಳು ನಿರ್ಮಿಸಿದ ತಾತ್ಕಾಲಿಕ ಹೊಂಡ ಹಾಗೂ ಸಂಚಾರಿ ತೊಟ್ಟಿಗಳಲ್ಲಿ ವಿಸರ್ಜಿಸಬೇಕು. ಈ ಮೂಲಕ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT