ಯಾದಗಿರಿ: ಪೋಕ್ಸೊ ಪ್ರಕರಣ ಸಂಬಂಧ ಶಹಾಪುರ ತಾಲ್ಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ, ಇಲ್ಲಿನ ಜಿಲ್ಲಾ ಪ್ರದಾನ ಸೇಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಮಾರ್ಚ್ 9ಕ್ಕೆ ಮುಂದೂಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬಾಲಕಿ ಜೊತೆ ಅನುಚಿತ ವರ್ತನೆ ಮಾಡಿದ ಆರೋಪದಡಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮುತ್ಯಾ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಸರ್ಕಾರಿ ಅಭಿಯೋಜಕ (ಪಿಪಿ) ಗುರುಲಿಂಗಪ್ಪ ತೇಲಿ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಧೀಶರು ವಾದ– ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿ ವಿಚಾರಣೆಯನ್ನು ಮಾ.9ಕ್ಕೆ ನಿಗದಿಪಡಿಸಿ ಮುಂದೂಡಿಕ್ಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊನೆಗೂ ವಿಚಾರಣೆಗೆ ಹಾಜರಿ: ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಶಹಾಪುರ ಗ್ರಾಮೀಣ ವೃತ್ತ ಕಚೇರಿಯಲ್ಲಿ ಗುರುವಾರ ವಿಚಾರಣೆಗೆ ಒಳಗಾದರು. ತನಿಖಾಧಿಕಾರಿ ಸಿಪಿಐ ಶರಣಗೌಡ ನ್ಯಾಮಣ್ಣನವರ್ ಅವರು ಗಂಟೆಗಳ ಕಾಲ ವಿಚಾರಣೆ ನಡೆಸಿದರು.

‘ಆರೋಪಿ ಮಲ್ಲಿಕಾರ್ಜುನ ಮುತ್ಯಾ ನೋಟಿಸ್ ಪ್ರಕಾರ ಗ್ರಾಮೀಣ ವೃತ್ತ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. ಸ್ವಖುಷಿ ಹೇಳಿಕೆ ಪಡೆದು, ಮೊಬೈಲ್ ವಶಕ್ಕೆ ಪಡೆಯಲಾಗಿದೆ. ತನಿಖೆಗೆ ಅವಶ್ಯವಿದ್ದರೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲ ಮೊಬೈಲ್ ಹಸ್ತಾಂತರಕ್ಕೆ ಸೂಚನೆ: ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ಬಳಿಸಿದ್ದ ಮೂಲ ಮೊಬೈಲ್ ತನಿಖಾಧಿಕಾರಿಗೆ ಹಸ್ತಾಂತರ ಮಾಡುವಂತೆ ಪೋಷಕರಿಗೆ ಸೂಚಿಸಲಾಗಿದೆ. ಬಾಲಕಿಯ ತಂದೆಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ವಿಡಿಯೊ ಅಪ್ಲೋಡ್ಗೆ ಸಂಬಂಧಿಯೊಬ್ಬರ ಬಳಸಲಾಗಿತ್ತು. ಅದನ್ನು ಹಸ್ತಾಂತರ ಮಾಡಲು ತಾಕೀತು ಮಾಡಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.

ವಿಚಾರಣೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಮುತ್ಯ, ‘ಕಾನೂನಿನ ಅಡಿಯಲ್ಲಿ ವಿಚಾರಣೆಗೆ ಸಹಕಾರ ಕೊಡುತ್ತೇನೆ. ತನಿಖಾಧಿಕಾರಿ ಕರೆದೆಗೆ ವಿಚಾರಣೆಗೂ ಹಾಜರಿ ಆಗುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.