ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಮಣಿಕಂಠ ರಾಠೋಡ ಸೇರಿ ಮೂವರಿಗೆ ಜೈಲು

Last Updated 28 ಜನವರಿ 2023, 6:15 IST
ಅಕ್ಷರ ಗಾತ್ರ

ಯಾದಗಿರಿ: ನಗರ ಪೊಲೀಸ್‌ ಠಾಣೆಯಲ್ಲಿ 2015ರ ಜುಲೈ 7ರಂದು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ನರೇಂದ್ರ ರಾಠೋಡ, ಬಾಬುಗೌಡ ಬಸವರಾಜ ಪಾಟೀಲ, ರಾಜುಗೌಡ ರಾಚಣ್ಣ ಸಾಹುಕಾರ ಎಂಬುವವರಿಗೆ ಇಲ್ಲಿನ ಸಿಜೆಎಂ ನ್ಯಾಯಾಲಯ 1 ವರ್ಷ ಜೈಲು ಮತ್ತು ತಲಾ ₹ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

2015ರಲ್ಲಿ ನಗರದ ಲಾಡಿಜ್‌ಗಲ್ಲಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ವಿತರಿಸಬೇಕಿದ್ದ ಹಾಲಿನ ಪೌಡರ್‌ ದಾಸ್ತಾನನ್ನು ಆಟೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿ ತಲಾ 500 ಗ್ರಾಂ ತೂಕದ 340 ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದರು.

ಮಾರಾಟ ಮಾಡುವ ಉದ್ದೇಶದಿಂದ ಹಾಲಿನ ಪ್ಯಾಕೆಟ್‌ಗಳನ್ನು ಸಂಗ್ರಹಿಸುತ್ತಿದ್ದರು ಎಂದು ತನಿಖೆ ವೇಳೆ ಸಾಬೀತಾಗಿದ ಎಂದು ಅಭಿಪ್ರಾಯಪಟ್ಟ ಸಿಜೆಎಂ ನ್ಯಾಯಾಧೀಶ ರವೀಂದ್ರ ಎಲ್‌. ಅವರು ಅಪರಾಧಿಗಳಿಗೆ ಒಂದು ವರ್ಷ ಜೈಲು, ತಲಾ ₹ 10 ಸಾವಿರ ದಂಡ, ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಎರಡು ತಿಂಗಳ ಸೆರೆ ವಾಸ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT