ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಸಾರಿಗೆ ಬಸ್ ಪಲ್ಟಿ – ನಾಲ್ವರಿಗೆ ಗಂಭೀರ ಗಾಯ

Last Updated 14 ಸೆಪ್ಟೆಂಬರ್ 2021, 7:48 IST
ಅಕ್ಷರ ಗಾತ್ರ

ಯಾದಗಿರಿ: ಸುರಪುರದಿಂದ ಯಾದಗಿರಿಗೆ ಪ್ರಯಾಣಿಸುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿದೆ.

ಶಹಾಪುರ ತಾಲ್ಲೂಕಿನ ಅನವಾರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿ 31 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ.

ರಂಜಿತ, ಶಿವಕುಮಾರ, ಸಾಬಣ್ಣ, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

21 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರನ್ನು ಶಹಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನವಾರ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಹೊಲದಲ್ಲಿ ಉರುಳಿ ಬಿದ್ದಿದೆ. ಚಾಲಕ ಪರಾರಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT