ಬುಧವಾರ, ಅಕ್ಟೋಬರ್ 28, 2020
20 °C

ಸುರಪುರ: ಮಾಸ್ಕ್ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ಕೋವಿಡ್-19 ಸೋಂಕನ್ನು ತೊಲಗಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ. ರೋಗದ ಬಗ್ಗೆ ಜನರು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಅಮೂಲ್ಯವಾದ ಜೀವ ಉಳಿಸಿಕೊಳ್ಳಲು ಅಂತರದೊಂದಿಗೆ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ಮನವಿ ಮಾಡಿದರು.

ವಾಲ್ಮೀಕಿ ವೃತ್ತದಲ್ಲಿ ಶುಕ್ರವಾರ ಮಾಸ್ಕ್ ದಿನಾಚರಣೆ ಅಂಗವಾಗಿ ನಗರಸಭೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೋಪಾಲ ಸ್ವಾಮಿ ದೇವಸ್ಥಾನ, ವಲ್ಲಭಭಾಯಿ ಪಟೇಲ್, ದರಬಾರ ರೋಡ್, ಗಾಂಧಿ ವೃತ್ತ, ಡಾ.ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಮೆರವಣಿಗೆ ನಡೆಯಿತು.

ಈ ವೇಳೆ ನಗರಸಭೆ ಸಿಬ್ಬಂದಿ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು. ಅಂತರದೊಂದಿಗೆ ಸ್ಯಾನಿಟೈಸರ್ ಬಳಸುವ ಕುರಿತು ಧ್ವನಿ ವರ್ಧಕದ ಮೂಲಕ ಮಾಹಿತಿ ನೀಡಲಾಯಿತು. ಪೌರಾಯುಕ್ತ ಶಾಂತಪ್ಪ ಹೊಸೂರು, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರಾ, ಬಸವರಾಜ ಕೊಡೇಕಲ್, ಆರೋಗ್ಯ ನಿರೀಕ್ಷಕ ಶಿವಪುತ್ರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು