ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ | ಗಣಿತ ಪರೀಕ್ಷೆ ಬರೆದ 405 ವಿದ್ಯಾರ್ಥಿಗಳು

Published 2 ಏಪ್ರಿಲ್ 2024, 16:13 IST
Last Updated 2 ಏಪ್ರಿಲ್ 2024, 16:13 IST
ಅಕ್ಷರ ಗಾತ್ರ

ನಾರಾಯಣಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಗಣಿತ ವಿಷಯದ ಪರೀಕ್ಷೆ ಬರೆದರು.

ಗಣಿತ ವಿಷಯಕ್ಕೆ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 405 ಮಂದಿ ಹಾಜರಾಗಿದ್ದರು. 8 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷಾ ಕೇಂದ್ರಕ್ಕೆ ಡಯಟ್‌ನ ಉಪನಿರ್ದೇಶಕ ವೃಷಭೇಂದ್ರಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯಗಳು, ಬೆಂಚ್ ವ್ಯವಸ್ಥೆ ಸೇರಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದನ್ನು ವೀಕ್ಷಿಸಿದರು ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಸಂಗಯ್ಯ ಬಿಕ್ಷಾವತಿಮಠ ತಿಳಿಸಿದರು.

ಸ್ಥಾನಿಕ ಜಾಗೃತದಳದ ಅಧಿಕಾರಿ ಪಾಲಾ ನಾಯಕ, ಉಪನ್ಯಾಸಕ ದೊಡ್ಡಪ್ಪ ಹೊಸಮನೆ, ಮಾದವರೆಡ್ಡಿ, ಚನ್ನಪ್ಪ, ವೀಕ್ಷಕರಾದ ವಿಜಯಕುಮಾರ ಅರಳಿ, ಸಿಆರ್‌ಪಿ ಮೌನೇಶ ಪಾಲ್ಗೊಂಡಿದ್ದರು. ಪರೀಕ್ಷಾ ಕೇಂದ್ರದ ಸುತ್ತಲು ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗೃಹರಕ್ಷಕದಳದ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT