ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಂಪಿಸ್ಕಿನ್’ ಹತೋಟಿಗೆ ಕ್ರಮ: ಸಚಿವ ಚವ್ಹಾಣ್

Last Updated 1 ಸೆಪ್ಟೆಂಬರ್ 2020, 8:24 IST
ಅಕ್ಷರ ಗಾತ್ರ

ಯಾದಗಿರಿ: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ‘ಲಂಪಿಸ್ಕಿನ್’ ಎಂಬ ರೋಗ ಕಾಣಿಸಿಕೊಂಡಿದ್ದು ನನ್ನ ಗಮನಕ್ಕೆ ಬಂದಿದೆ. ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು ಇಲ್ಲವೇ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಒಂದೆಡೆ ಕೊರೊನಾ ಸಂಕಷ್ಟ ಮತ್ತೊಂದೆಡೆ ನೆರೆಯಿಂದ ಆದಾಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಈ ಸಮಯದಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’ ಜಾನುವುವಾರುಗಳಿಗೆ ಕಾಯಿಲೆ ಕಂಡುಬಂದಿದೆ.ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡುಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕೀಡಾಗಿರುವುದು ನನ್ನ ಗಮನಕ್ಕೂ ಬಂದಿದೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗ ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ರೋಗ ಕಂಡುಬರುವ ಆತಂಕವಿದ್ದು, ಪಶುಸಂಗೋಪನೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT