ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೀಘ್ರದಲ್ಲೇ ನೀರಾವರಿ ಸಲಹಾ ಸಮಿತಿ ಸಭೆ’

Last Updated 7 ನವೆಂಬರ್ 2021, 4:13 IST
ಅಕ್ಷರ ಗಾತ್ರ

ಸುರಪುರ: ‘ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ತೀರ್ಮಾನಿಸಲಾಗುವುದು’ ಎಂದು ಶಾಸಕ ರಾಜೂಗೌಡ ತಿಳಿಸಿದರು.

ನಗರದ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ 32 ಶಾಸಕರು ಬರುತ್ತಾರೆ. ಕುಡಿಯುವ ನೀರು, ಕೈಗಾರಿಕೆ, ರೈತರ ಬೆಳೆಗಳಿಗೆ ನೀರು ಸಾಕಾಗುತ್ತಿದೆಯೇ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಿ ವಾರಾಬಂಧಿ ಅಥವಾ ಬೆಳೆಗಳ ಅನುಕೂಲಕ್ಕೆ ಅಗತ್ಯವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದರು.

‘ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ನೀರಿನ ಲಭ್ಯತೆ ನೋಡಿಕೊಂಡು ಹಿಂಗಾರು ಬೆಳೆಗೆ ನೀರು ಹರಿಸಲು ಸರ್ಕಾರ ಮಟ್ಟದಲ್ಲಿ ಶೀಘ್ರದಲ್ಲೇ ತೀರ್ಮಾನಿಸಲಾಗುವುದು. ನಾರಾಯಣಪುರ ಜಲಾಶಯದ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಂದ ನೀರಿನ ಸಂಗ್ರಹದ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುವುದು’ ಎಂದರು.

‘ಸರ್ಕಾರ ರೈತರೊಂದಿಗಿದೆ. ರೈತರ ಹಿತ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ಕೈಗೊಳ್ಳಲಾಗುತ್ತದೆ. ರೈತರು ಸಮಾಧಾನ ಚಿತ್ತದಿಂದ ಇರಬೇಕು. ಶೀಘ್ರದಲ್ಲೇ ಹಿಂಗಾರು ಬೆಳೆಗಳಿಗೆ ನೀರು ಹರಿಸುವ ಕುರಿತು ಅಧಿಕೃತವಾಗಿ ಸರ್ಕಾರ ನಿರ್ಧಾರ ಪ್ರಕಟಿಸುತ್ತದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT