ಭಾಲ್ಕಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧಿಡೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯವನ್ನು ವಿಚಾರಿಸಿ, ಆಸ್ಪತ್ರೆಯಲ್ಲಿ ದೊರಕುತ್ತಿರುವ ಚಿಕಿತ್ಸೆ ಕುರಿತು ರೋಗಿಗಳಿಂದ ಮಾಹಿತಿ ಪಡೆದರು.
ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಸ್ವಚ್ಛತೆ, ಚಿಕಿತ್ಸೆ ಬಗ್ಗೆ ಪರಿಶೀಲನೆ ನಡೆಸಿದರು. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡ ಜನರೇ ಆಗಿರುವುದರಿಂದ ವೈದ್ಯರು ರೋಗಿಗಳ ಜೊತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ಗುಣಮಟ್ಟದ ಚಿಕಿತ್ಸೆಗೆ ಪ್ರಥಮಾದ್ಯತೆ ನೀಡಿ ರೋಗಿಗಳು ಶೀಘ್ರ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ರೋಗಿಗಳಿಂದ ಆಸ್ಪತ್ರೆಯಲ್ಲಿ ದೊರಕುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದರು
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ, ಮುಖ್ಯ ವೈದ್ಯಾಧಿಕಾರಿ ಅಬ್ದುಲ್ ಖಾದರ್, ಪ್ರಮುಖರಾದ ಶಿವಶಂಕರ ಕಾಮಶೆಟ್ಟಿ, ಹಣಮಂತರಾವ್ ಚವ್ಹಾಣ ಸೇರಿದಂತೆ ಇತರರು ಇದ್ದರು.