ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಸದರಿ ಪ್ರಕರಣದ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡಿ ಮಾಹಿತಿ ನೀಡಿದೆ. ಬೆಳಿಗ್ಗೆ ಅಸ್ವಾಭಾವಿಕ ಸಾವು ಎಂದು ದಾಖಲಾಗಿತ್ತು. ಪರಶುರಾಮ ಅವರ ಪತ್ನಿ ದೂರು ನೀಡಿದ ಮೇಲೆ ಪರಿಶಿಷ್ಟ ಜಾತಿ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ದೂರು ದಾಖಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.