ಶಹಾಪುರ (ಯಾದಗಿರಿ ಜಿಲ್ಲೆ): ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

'ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ. ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು, ಕ್ರಮಕ್ಕೆ ಮುಂದಾಗಿದ್ದೇವೆ' ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

'ಪ್ರಸ್ತುತ ಬಾಲಕಿ ಮತ್ತು ಮಗು ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿ ಇದ್ದಾರೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ, ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆಯೂ ತಾಕೀತು ಮಾಡಲಾಗಿದೆ' ಎಂದರು.

ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯೆ ನೀಡಿದ ವಸತಿ ಶಾಲೆಯ ಪ್ರಾಂಶುಪಾಲರಾದ ಬಸಮ್ಮ, 'ಬಾಲಕಿಯಲ್ಲಿ ಗರ್ಭಿಣಿಯಾಗಿದ್ದರ ಲಕ್ಷಣಗಳು ಕಂಡಿಲ್ಲ. ಅಚ್ಚರಿಯೂ ಆಗಿದೆ. ಬಾಲಕಿಗೆ ಮದುವೆ ಮಾಡಿದ್ದಾರೋ, ಇಲ್ಲವೋ ಎಂಬುದು ಸಹ ನಮಗೆ ಗೊತ್ತಿಲ್ಲ. ಪೋಷಕರು ಈ ಬಗ್ಗೆ ಮಾಹಿತಿ ನೀಡಿಲ್ಲ. ನಾನೂ ಆಸ್ಪತ್ರೆಯಲ್ಲಿ ಇದ್ದೇನೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.