ಸೋಮವಾರ, ಆಗಸ್ಟ್ 2, 2021
21 °C
‘ಅಂಗವಿಕಲರಿಗೆ ಪ್ರೋತ್ಸಾಹ ಅಗತ್ಯ’

53 ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮುದ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಅಂಗವೈಕಲ್ಯ ದೇಹಕ್ಕೆ ಹೊರತು ಮನಸ್ಸಿಗಲ್ಲ, ಎಲ್ಲರಂತೆ ಅಂಗವಿಕಲರು ಸರಿಸಮಾನರು. ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದರೆ ಅಂಗವಿಕಲರು ಉತ್ತಮ ಸಾಧನೆ ಮಾಡಬಲ್ಲರು ಎಂದು ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ ಅಭಿಪ್ರಾಯಪಟ್ಟರು.

ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಅಂಗವಿಕಲರಿಗೆ ಸ್ಥಳಿಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 53 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

ತ್ರಿಚಕ್ರ ವಾಹನ ಸರಿಯಾಗಿ ಸದ್ಬಳಕೆಯಾಗಲಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಿಕಲಚೇತನರ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬಿ.ವಿ. ದೀಪಿಕಾ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.