ಶನಿವಾರ, ಜುಲೈ 31, 2021
27 °C
ನಗರದ ಅಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಮುದ್ನಾಳ

ಸಿಸಿ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಅಂಬೇಡ್ಕರ್ ನಗರದಲ್ಲಿರುವ ಅಂಬೇಡ್ಕರ್ ಭವನದ ಒಳಾಂಗಣದಲ್ಲಿ ₹8 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಯಾದಗಿರಿ ಜಿಲ್ಲಾ ಕೇಂದ್ರವಾಗಿ 10 ವರ್ಷ ಕಳೆದಿದೆ. ವರ್ಷದಿಂದ ವರ್ಷಕ್ಕೆ ನಗರ ವಿಸ್ತಾರವಾಗಿ ಬೆಳೆಯುತ್ತಿದೆ. ಇನ್ನೂ ನಾವು ಮಾಡಬೇಕಾದ ಕೆಲಸ ಬಹಳಷ್ಟಿದೆ. ಹಂತ ಹಂತವಾಗಿ ಯೋಜನೆಗಳ ಅನುಷ್ಠಾನಕ್ಕೆ ಯತ್ನಿಸುತ್ತೇನೆ ಎಂದು ತಿಳಿಸಿದರು.

ನಗರದ ಎಲ್ಲಾ ವಾರ್ಡ್‍ಗಳಲ್ಲಿ ಜನರ ಬೇಡಿಕೆಯಂತೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಎಲ್ಲರ ಸಹಕಾರದಿಂದ ನಗರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಹೇಳಿದರು.

ಈ ವೇಳೆ ನಗರಸಭೆ ಪೌರಾಯುಕ್ತ ಬಕ್ಕಪ್ಪ, ಸಹಾಯಕ ಎಂಜಿನಿಯರ್ ರಾಕೇಶರಡ್ಡಿ, ಯೂಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಸದಸ್ಯರಾದ ಬಸಮ್ಮ ಮಹೇಶ ಕುರಕುಂಬಳ, ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಶರಣಗೌಡ ಬಾಡಿಯಾಳ, ಖಂಡಪ್ಪ ದಾಸನ್, ಮಲ್ಲಿಕಾರ್ಜುನ ಕುರಕುಂಬಳ, ದೇವಿಂದ್ರಪ್ಪ ಮುನಮುಟ್ಗಿ, ಸುರೇಶ ರಾಠೋಡ, ಪರಶುರಾಮ, ಚನ್ನು ಮಾಳಿಕೇರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು