ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಮೊಬೈಲ್ ಕಳವು; ಇಬ್ಬರ ಬಂಧನ, ₹2 ಲಕ್ಷ ಮೌಲ್ಯದ ಮೊಬೈಲ್‌ಗಳು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 2 ಲಕ್ಷ ಮೌಲ್ಯದ 40 ಮೊಬೈಲ್ ಫೋನ್‌ಗಳು, ಒಂದು ಕಾರು ವಶಕ್ಕೆ ಪಡೆದಿದ್ದಾರೆ.

ತೆಲಂಗಾಣದ ಆನಂದ, ಮೈಸೂರಿನ ಅಶ್ವಿನಿ ಬಂಧಿತರು. ನಗರದ ಹಳೆ ಬಸ್‌ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಮಾರುತಿ ಕಾರಿನಲ್ಲಿ ತಿರುಗಾಡುತ್ತಿದ್ದ ಆರೋಪಿಗಳನ್ನು ನಗರ ಪೊಲೀಸ್‌ ಠಾಣೆಯ ಪಿಎಸ್ಐ ವೀರಣ್ಣ ಹಾಗೂ ಸಿಬ್ಬಂದಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

‘ಆರೋಪಿಗಳು ಯಾದಗಿರಿ, ಬಾಗಲಕೋಟೆ, ಬಳ್ಳಾರಿ, ಸವದತ್ತಿ ಸೇರಿದಂತೆ ವಿವಿಧ ಕಡೆ ಕಳವು ಮಾಡುತ್ತಿದ್ದರು. ಕಾರಿನ ಬಾಗಿಲು ಬಳಿಯ ಸ್ಕ್ರೂ ತೆಗೆದು ಕಳವು ಮಾಡಿದ್ದ ಮೊಬೈಲ್‌ಗಳನ್ನು ಅಲ್ಲಿ ಸಂಗ್ರಹಿಸಿ ಹೈದರಾಬಾದ್‌ನಲ್ಲಿ ಮಾರಾಟ ಮಾಡುತ್ತಿದ್ದರು.  ಜನಸಂದಣಿ ಸ್ಥಳದಲ್ಲಿ ಸಣ್ಣ ಮಕ್ಕಳನ್ನು ಬಳಸಿಕೊಂಡು ಮೊಬೈಲ್ ಕಳ್ಳತನ ಮಾಡಿಸುತ್ತಿದ್ದರು. ನಂತರ ₹500, ₹1,000 ನೀಡುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ. 

ಇಬ್ಬರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು