ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದ ತುಂತುರು ಮಳೆಯಾಗುತ್ತಿದೆ.
ಬೆಳಗಿನ ಜಾವದಿಂದ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯಾಗಿದ್ದು, ತಂಪಿನ ವಾತಾವರಣ ನಿರ್ಮಾಣವಾಗಿದೆ.
ಯಾದಗಿರಿ ತಾಲ್ಲೂಕಿನ ಸೈದಾಪುರ, ಸುರಪುರ ತಾಲ್ಲೂಕಿನ ಕಕ್ಕೇರಾ, ಕೆಂಭಾವಿ, ಹುಣಸಗಿ ತಾಲ್ಲೂಕಿನ ನಾರಾಯಣಪುರದಲ್ಲಿ ತುಂತುರು ಮಳೆಯಾಗುತ್ತಿದೆ. ಆಗಾಗ ಮಳೆ ಬಂದು ಬಿಡುವು ನೀಡಿ ಮತ್ತೆ ಜಿಟಿಜಿಟಿ ಸುರಿಯುತ್ತಿದೆ.
ಹಲವು ದಿನಗಳಿಂದ ಮಳೆಗಾಗಿ ಎದುರು ನೋಡುತ್ತಿದ್ದ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ನಾರಾಯಣಪುರ ಜಲಾಶಯದ ಮಟ್ಟ (ಜುಲೈ 18)
ನಾರಾಯಣಪುರ; 492.25 ಮೀ; 486.78 ಮೀ; 00 ;50 (ಜಲಾಶಯ; ಗರಿಷ್ಠ ಮಟ್ಟ; ಮಂಗಳವಾರದ ಮಟ್ಟ; ಒಳಹರಿವು (ಕ್ಯುಸೆಕ್‌ಗಳಲ್ಲಿ); ಹೊರಹರಿವು)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.