ಹಣ ದುರ್ಬಳಕೆ ಪ್ರಕರಣ; ಮತ್ತೊಬ್ಬ ಆರೋಪಿ ಸೆರೆ

7

ಹಣ ದುರ್ಬಳಕೆ ಪ್ರಕರಣ; ಮತ್ತೊಬ್ಬ ಆರೋಪಿ ಸೆರೆ

Published:
Updated:

ಯಾದಗಿರಿ: ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಅನುದಾನ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿರ್ಮಿತಿ ಕೇಂದ್ರದ ಮತ್ತೊಬ್ಬ ಅಧಿಕಾರಿ ಎಂ.ಎಂ. ಖಾಜಿ ಅವರವರನ್ನು ಪೊಲೀಸರು ಕಲಬುರ್ಗಿಯಲ್ಲಿ ಶನಿವಾರ ಬಂಧಿಸಿದ್ದಾರೆ.

ವಿವಿಧ ಅಭಿವೃದ್ಧಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನದಲ್ಲಿ ಒಟ್ಟು ಮೂವರು ಅಧಿಕಾರಿಗಳು ಶಾಮೀಲಾಗಿ ಒಟ್ಟು ₹4.18 ಕೋಟಿ ದುರ್ಬಳಕೆ ಮಾಡಿಕೊಂಡಿದ್ದರು. ತನಿಖೆ ನಡೆಸಿದ ಈ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮೂವರು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದ್ದರು. ನಂತರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಎಂ.ಎಂ.ಖಾಜಿ ತಲೆ ಮರೆಸಿಕೊಂಡಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !