ಸೋಮವಾರ, ಜನವರಿ 18, 2021
27 °C

ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಣಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಮುಖ್ಯಮಂತ್ರಿ ‌ಬಿ.ಎಸ್‌.ಯಡಿಯೂರಪ್ಪ ಅವರು ಹಿಂದುಳಿದ ವರ್ಗಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಸಣ್ಣ ಪುಟ್ಟ ಸಮುದಾಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋವಿಂದರಾಜ್ ಹೇಳಿದರು.

‌ಸಾಮಾಜಿಕ ನ್ಯಾಯದ ಸಿದ್ಧಾಂತದಡಿ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವವನ್ನು ಜಾರಿಗೆ ತಂದವರು ಯಡಿಯೂರಪ್ಪ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಾಬು ಮಾತನಾಡಿ, ಮಹಾಶಕ್ತಿ ಕೇಂದ್ರದಲ್ಲಿ ಒಬ್ಬ ಹಿಂದುಳಿದ ವರ್ಗ, ಬೂತ್ ಮಟ್ಟದಲ್ಲಿ ಇಬ್ಬರು ಹಿಂದುಳಿದ ವರ್ಗದವರು ಒಳಗೊಂಡಂತೆ ಸಮಿತಿ ರಚಿಸುವಲ್ಲಿ ನಿಗಾವಹಿಸಬೇಕೆಂದು ಕಾರ್ಯಕಾರಿಣಿ ಸದಸ್ಯರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಹಿಂದುಳಿದ ವರ್ಗಗಳ ಸಂಘಟನೆ ಜಿಲ್ಲೆಯಲ್ಲಿ ಸದೃಢವಾಗಿದೆ. ಜತೆಗೆ ಎಲ್ಲ ಒಳಪಂಗಡಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಕೆಲಸಗಳನ್ನು ತಿಳಿಸುವ ಮತ್ತು ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಖಾನಾಪುರ, ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಪ್ಪ ತಳವಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೀಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂರು, ಗುರುಕಾಮಾ, ಮಲ್ಲಿಕಾರ್ಜುನ ರಸ್ತಾಪುರ, ನಾಗರಾಜಗೌಡ ಮಾನಸಗಲ್, ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರ, ಆನಂದ ಗಡ್ಡಿಮನಿ, ಸಿದ್ದುಕುಮಾರ ಗುಡೂರು, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೀಂದ್ರಪ್ಪ ಯಲಿಮನಿ, ನೀಲಂಕಠ ಬೈಚಬಾಳ, ನಿಂಗಣ್ಣ ಪೂಜಾರಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು