ಭಾನುವಾರ, ಸೆಪ್ಟೆಂಬರ್ 25, 2022
20 °C

ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಪೊಲೀಸರು ಜಾಗೃತಿ ಮೂಡಿಸಿದರು.

ಹುಣಸಗಿ ತಾಲ್ಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ನಾರಾಯಣಪುರ ಡ್ಯಾಂ ನಿಂದ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ 1.50 ಲಕ್ಷ ಕ್ಯುಸೆಕ್‌ಗಿಂತ ಅಧಿಕ ನೀರು ಬಿಡುತ್ತಿದ್ದು, ಸಾರ್ವಜನಿಕರು ಮತ್ತು ಜಾನುವಾರುಗಳು ನದಿಯ ಸಮೀಪ ಹೋಗದಂತೆ ಡಂಗೂರ ಬಾರಿಸಿದರು.

ಸ್ವಚ್ಛತಾ ವಾಹಿನಿ‌ ವಾಹನದ ಮೂಲಕ ಮೈಕ್‌ನಲ್ಲಿ ಎಚ್ಚರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು