ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದ ಜಿ.ಕುಮಾರನಾಯಕ ಕಾರ್ಯಾಲಯ ಆರಂಭ

Published : 16 ಸೆಪ್ಟೆಂಬರ್ 2024, 16:11 IST
Last Updated : 16 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿ ರಾಯಚೂರು ಸಂಸದ ಜಿ.ಕುಮಾರನಾಯಕ ಅವರ ಜನಸಂಪರ್ಕ ಕಾರ್ಯಾಲಯ ಸುಮಾರು ಮೂರು ತಿಂಗಳ ನಂತರ ಆರಂಭವಾಯಿತು.

ಸೋಮವಾರ ಲಕ್ಷ್ಮಿನರಸಿಂಹ ಪೂಜಾ ಕಾರ್ಯಕ್ರಮದೊಂದಿಗೆ ಕಾರ್ಯಾಲಯವನ್ನು ಸಂಸದರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಕಚೇರಿ ತೆರೆಯಲಾಗಿದೆ. ಶೀಘ್ರವೇ ಆಪ್ತ ಕಾರ್ಯದರ್ಶಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗುವುದು. ಆಗಾಗ ಕಚೇರಿಗೆ ಭೇಟಿ ಕೊಡುವ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸುವೆ ಎಂದು ತಿಳಿಸಿದರು.

 ಶಾಸಕರಾದ ರಾಜಾ ವೇಣುಗೋಪಾಲ ನಾಯಕ,  ಚನ್ನಾರೆಡ್ಡಿ ಪಾಟೀಲ ತುನ್ನೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ ಅನಪುರ, ಕಾಂಗ್ರೆಸ್ ಮುಖಂಡರಾದ ಭೀಮಣ್ಣ ಮೇಟಿ, ಭೀಮರಾಯ ಠಾಣಗುಂದಿ, ಸುದರ್ಶನ ನಾಯಕ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಮಲ್ಲಣ್ಣ ಐಕೂರ, ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಲಚಮರೆಡ್ಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ನಿಜಗುಣ ದೋರನಹಳ್ಳಿ, ಭೀಮಾಶಂಕರ, ರಾಜಾ ಮೈನೋದ್ದೀನ್, ಮಾಳಿಂಗರಾಯ, ಪರಶುರಾಮ್, ಸಾಬಣ್ಣ ಕ್ಯಾತನಾಳ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT