ಯಾದಗಿರಿ: ‘ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ವೃದ್ಧಿಯೊಂದಿಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ನಗರದ ಎಸ್ಡಿಎನ್ ರೆಸಿಡೆನ್ಸಿಯಲ್ಲಿ ಮಂಗಳವಾರ ಎಂಎಸ್ಎಂಇಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗ ಗೊಳಿಸುವುದು ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್ ಇಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದಲ್ಲಿ ಆರ್ಥಿಕ ವೃದ್ಧಿ ಜೊತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಸಾಧ್ಯವಿದೆ. ಈ ದಿಸೆಯಲ್ಲಿ ರಾಜ್ಯದ ಸಣ್ಣ ಉದ್ದಿಮೆದಾರರನ್ನು ತೊಂದರೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ವಿಶೇಷ ಗಮನ ನೀಡುತ್ತಿದೆ’ ಎಂದು ಹೇಳಿದರು.

‘ಸೂಕ್ಷ್ಮ ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಸಿಯಾದ ವಾರ್ಷಿಕೋತ್ಸವದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಿರ್ಣಯ ಕೈಗೊಂಡಿದ್ದಾರೆ’ ಎಂದು ಹೇಳಿದರು.

‘ಈ ಭಾಗದಲ್ಲಿ ಕೃಷಿಗೆ ಒತ್ತು ನೀಡಲಾಗುತ್ತಿದೆ. ಅದರಂತೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಗಮನ ನೀಡಿದಲ್ಲಿ ಕಾರ್ಮಿಕರ ವಲಸೆ ಸಮಸ್ಯೆ ನಿವಾರಣೆಯಾಗಲಿದೆ. ಈ ದಿಸೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಈ ಭಾಗದ ಮುಂಡರಗಿಯಲ್ಲಿ ಕನಿಷ್ಠ 50ರಿಂದ 100 ಎಕರೆ ಜಮೀನಿನಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ, ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ. ಅದರಂತೆ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಜೇವರ್ಗಿ, ಯಾದಗಿರಿ ಭಾಗಗಳಲ್ಲಿ ಕಡಿಮೆ ವೆಚ್ಚದ ಭೂ ನೀಡುವ ಉದ್ದೇಶ ಹೊಂದಲಾಗಿದ್ದು, ಶಹಾಪುರದಲ್ಲಿ 50 ಎಕರೆ ಜಮೀನು ಗುರುತಿಸಲಾಗಿದೆ’ ಎಂದು ಹೇಳಿದರು.

‘ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ, ‘ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗಾವಕಾಶಗಳ ಹೆಚ್ಚಿನ ಸೃಷ್ಟಿಗೆ ಸಣ್ಣ ಕೈಗಾರಿಕೆಗಳು ಬಹುಮುಖ್ಯ. ಉದ್ದಿಮೆದಾರರು ಆಧಾರ ಸ್ತಂಭವಾಗಿದ್ದು, ಜಿಲ್ಲಾಡಳಿತ ವತಿಯಿಂದ ಅವಶ್ಯಕ ನೆರವು ಒದಗಿಸಲಾಗುವುದು’ ಎಂದು ಹೇಳಿದರು.

ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕೆ ಸಂಸ್ಥೆ ಅಧ್ಯಕ್ಷ ದಿನೇಶಕುಮಾರ ಜೈನ್ ಮಾತನಾಡಿದರು.

ರೈಸ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಹನುಮದಾಸ್ ಮುಂದಡಾ, ಸುರಪುರ ಕೈಗಾರಿಕೆ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಜೆಟ್ಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸತೀಶ್ ಕುಮಾರ್, ಕಾರ್ಯದರ್ಶಿ ಗುರು ಮಣಿಕಂಠ, ವಿಟಿಪಿಸಿ ಸಹಾಯಕ ನಿರ್ದೇಶಕ ಜಾಫರ್ ಅನ್ಸಾರಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಕುಲಶೇಖರನ ಉಪಸ್ಥಿತರಿದ್ದರು. ರಿಪೋರ್ಟ ಆನ್ ಕರ್ನಾಟಕ ಎಕ್ಸ್ ಪೋರ್ಟ್ ಪುಸ್ತಕವನ್ನು ಸಚಿವರು ಬಿಡುಗಡೆಗೊಳಿಸಿದರು. ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.