ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದನೂರು ಗ್ರಾ.ಪಂ.ಗೆ ಅವಿರೋಧ ಆಯ್ಕೆ

Last Updated 14 ಮೇ 2022, 2:30 IST
ಅಕ್ಷರ ಗಾತ್ರ

ಹುಣಸಗಿ: ತಾಲ್ಲೂಕಿನ ಮುದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಗ್ರಾಮದ (ಹಿಂದುಳಿದ ವರ್ಗ ಅ ) ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಶಾಂತಮ್ಮ ನಿಂಗಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಂದು ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ಮೂವರು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರಿಂದ ಶಾಂತಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದೆ. ಚುನಾವಣಾ ಸಮಯ ಪೂರ್ಣಗೊಳ್ಳುತ್ತಿದ್ದಂತೆಯೇ ಅಭ್ಯರ್ಥಿಗಳ ಬೆಂಬಲಿಗರು ಪರಸ್ಪರ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಅಗ್ನಿ ಗ್ರಾಮ ಪಂಚಾಯಿತಿ ಅಗತೀರ್ಥ ಗ್ರಾಮದ ಅನುಸೂಚಿತ ಜಾತಿ ಸ್ಥಾನಕ್ಕೆ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂತೆಗೆದುಕೊಂಡಿದ್ದು, ಮರೆವ್ವ ಬಸಪ್ಪ ಹಾಗೂ ಸಿದ್ದಪ್ಪ ದೊಡ್ಡಮನಿ ಕಣದಲ್ಲಿ ಉಳಿದುಕೊಂಡಿದ್ದಾರೆ.

ಬೈಲಕುಂಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಸಾಗರ ಸಾಮಾನ್ಯ ಮಹಿಳೆ ಸ್ಥಾನಕ್ಕೆ ನಾಲ್ವರು ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ಇಬ್ಬರು ತಮ್ಮ ನಾಮ ಪತ್ರವನ್ನು ವಾಪಸ್ ಪಡೆದಿದ್ದರಿಂದಾಗಿ ಬಸಮ್ಮ ಹಾಗೂ ಬಸವ್ವ ಇಬ್ಬರು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT