ಬುಧವಾರ, ಮಾರ್ಚ್ 29, 2023
31 °C

ಸೈದಾಪುರ ಹೊರವಲಯದಲ್ಲಿ ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ  ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸಮೀಪದ ನಾಗ್ಲಾಪುರ ಗ್ರಾಮದ ಸಾಬಯ್ಯ ಯಲ್ಲಪ್ಪ (30) ಕೊಲೆಯಾದ ಯುವಕ. ದುಷ್ಕರ್ಮಿಗಳು ಯುವಕನಿಗೆ ಕಲ್ಲಿನಿಂದ ಹೊಡೆದಿದ್ದರು ಎಂದು ತಿಳಿದು ಬಂದಿದೆ.

ಪಟ್ಟಣದ ಹೊರವಲಯದ ಕರಿಬೆಟ್ಟ ಕ್ರಾಸ್ ಹತ್ತಿರ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಹತ್ತಿ ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಯುವಕನ್ನು ಆಂಬುಲೆನ್ಸ್ ಮೂಲಕ ಸೈದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆರೋಗ್ಯ ಕೇಂದ್ರದಲ್ಲಿ ಯುವಕ ಕೊನೆಯುಸಿರೆಳೆದಿದ್ದಾನೆ.

ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು