ಮಂಗಳವಾರ, ಮಾರ್ಚ್ 28, 2023
23 °C

ಮೈಲಾಪುರ ಮೈಲಾರಲಿಂಗೇಶ್ವರ ದೇವಸ್ಥಾನ, ಭಕ್ತರಿಗೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ತಾಲ್ಲೂಕಿನ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಕೋವಿಡ್ ಕಾರಣದಿಂದ ದೇಗುಲ ಬಂದ್ ಮಾಡಲಾಗಿತ್ತು.

ಜಿಲ್ಲಾಡಳಿತದ ಸೂಚನೆ ಮೇರೆಗೆ ಗುರುವಾರ ತಾಲ್ಲೂಕು ಆಡಳಿತ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿಯವರು ದೇವಸ್ಥಾನ ಶುಚಿಗೊಳಿಸಿ ಮುಖ್ಯ ದ್ವಾರಬಾಗಿಲುಗಳಿಗೆ ವಿವಿಧ ಹೂವುಗಳಿಂದ ಅಲಂಕಾರ ಮಾಡಿದ್ದರು. ಮಲ್ಲಯ್ಯನಿಗೆ ವಿಶೇಷ ಪೂಜೆ ಕೈಂಕರ್ಯ ನೆರವೇರಿಸಿ ಭಕ್ತರನ್ನು ಕಾಡುತ್ತಿರುವ ಕೊರೊನಾ ವೈರಸ್ ಸರ್ವನಾಶವಾಗಲಿ. ರೈತಾಪಿ ವರ್ಗಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿ ಮಲ್ಲಯ್ಯನಿಗೆ ಶಿವಾ ಏಳು ಕೋಟಿಗೆ, ಏಳು ಕೋಟಿಗೆ ಎಂಬ ಜೈಕಾರ ಹಾಕಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.

ಈ ವೇಳೆ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ದಳಪತಿ ಮುಷ್ಟೂರು, ಖಂಡಪ್ಪ ಪೂಜಾರಿ, ಸೋಮಣ್ಣ ಪೂಜಾರಿ, ಮಲ್ಲಿಕಾರ್ಜುನ ಸೇರಿದಂತೆ ಅಪಾರ ಭಕ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.