ಭಾನುವಾರ, ಮಾರ್ಚ್ 29, 2020
19 °C
ಮತ್ತೆ ಹೆಚ್ಚಿದ ಒಳ ಹರಿವು 

1.68 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ಕಳೆದ ಎರಡು ಮೂರು ದಿನಗಳಿಂದಲೂ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಮತ್ತೆ ಒಳ ಹರಿವು ದಾಖಲಾಗುತ್ತಿದ್ದು, ಗುರುವಾರ ಮತ್ತೆ ಒಳಹರಿವು ಹೆಚ್ಚಾಗಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. 

ಬುಧವಾರ ಬೆಳಿಗ್ಗೆ 35 ಸಾವಿರ ಕ್ಯುಸೆಕ್ ಇದ್ದ ಒಳಹರಿವು, ಸಂಜೆ 58 ಸಾವಿರ ಕ್ಯುಸೆಕ್ ಏರಿಕೆಯಾಗಿತ್ತು. ಗುರುವಾರ ಬೆಳಿಗ್ಗೆ 70 ಸಾವಿರ ಕ್ಯುಸೆಕ್‌ಗೆ ಏರಿಕೆಯಾಗಿತ್ತು. ಸಂಜೆ ಇನ್ನೂ ಹೆಚ್ಚಾಗಿದ್ದು 1.30 ಲಕ್ಷ ಕ್ಯುಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಮಟ್ಟ 492.23 ಕಾಯ್ದುಕೊಂಡು 15 ಗೇಟ್‌ಗಳ ಮೂಲಕ 1.68 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು