ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರಿಗೆ ಸದೃಢ ಆರೋಗ್ಯ ಅವಶ್ಯ; ಶಿಲ್ಪಾ ಶರ್ಮಾ ಸಲಹೆ

Last Updated 2 ಜನವರಿ 2022, 5:03 IST
ಅಕ್ಷರ ಗಾತ್ರ

ಯಾದಗಿರಿ: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ನೌಕರರು ಗ್ರಾಮೀಣ ಭಾಗದ ಜನರೊಂದಿಗೆ ನೇರವಾಗಿ ಸಂಪರ್ಕದಲ್ಲಿದ್ದು ನಿತ್ಯ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ, ನೌಕರರು ತಮ್ಮ ಆರೋಗ್ಯವನ್ನುಸದೃಢವಾಗಿ ಕಾಪಾಡಿಕೊಳ್ಳುವುದು ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಿಬ್ಬಂದಿಗೆ ಪ್ರಮಾಣ ಪತ್ರ ವಿತರಿಸಿ, ಬಳಿ ಅವರು ಮಾತನಾಡಿದರು.

ನಮ್ಮ ಸಿಬ್ಬಂದಿಗೆ ಪ್ರತಿದಿನ ಸಾಕಷ್ಟು ಕೆಲಸ, ಕಾರ್ಯಗಳು ಇರುತ್ತವೆ. ಯಾವುದೇ ಒತ್ತಡಕ್ಕೆ ಒಳಗಾಗದೆ, ಕೆಲಸ ನಿರ್ವಹಣೆ ಮಾಡಬೇಕು. ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಿಯಮಿತವಾಗಿ ಯೋಗಾಸನ, ವ್ಯಾಯಾಮ ಮಾಡಿದರೆ, ಇದರಿಂದ ಕೆಲಸದ ಒತ್ತಡವನ್ನು ಸುಲಭವಾಗಿ ಎದುರಿಸಬಹುದು. ಸರ್ಕಾರ ಹಮ್ಮಿಕೊಳ್ಳುವ ಯೋಜನೆಗಳು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಘಟಿತರಾಗಿ ಕೆಲಸ ಮಾಡಿದರೆ, ಆ ಯೋಜನೆಗಳು ಯಶಸ್ವಿಯಾಗಿ ಅಭಿವೃದ್ಧಿಗೆ ಮುನ್ನುಡಿಯಾಗುತ್ತವೆ ಎಂದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಶರಬೈ, ಸಹಾಯಕ ನಿರ್ದೇಶಕ (ಆಡಳಿತ) ಖಲೀಲ್ ಅಹಮ್ಮದ್, ವ್ಯವಸ್ಥಾಪಕ ಶಿವರಾಯ, ನರೇಗಾ ವಿಷಯ ನಿರ್ವಾಹಕ ಅನಸರ್ ಪಟೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT