ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ಕೇಂದ್ರಗಳಲ್ಲಿ ನಡೆದ ‘ನೀಟ್‌’

Last Updated 13 ಸೆಪ್ಟೆಂಬರ್ 2020, 16:21 IST
ಅಕ್ಷರ ಗಾತ್ರ

ಯಾದಗಿರಿ: ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಆಯುಷ್‌ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ 2020ನೇ ಸಾಲಿನ ‘ರಾಷ್ಟ್ರೀಯ ಸಾಮಾನ್ಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌) ಜಿಲ್ಲೆಯ ಎರಡು ಉಪ ಕೇಂದ್ರಗಳಲ್ಲಿ ಭಾನುವಾರ ನಡೆಯಿತು.

ಜಿಲ್ಲೆಯ ಶಹಾಪುರದಶ್ರೀಸಾಯಿ ವಿದ್ಯಾನಿಕೇತನ ಶಾಲೆ, ಎಸ್‌ಎಂಸಿಜೈನ್‌ ಶಾಲೆಯಲ್ಲಿ ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಕೋವಿಡ್‌ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಿತು.

ಶ್ರೀಸಾಯಿ ವಿದ್ಯಾನಿಕೇತ ಶಾಲೆಯಲ್ಲಿ 384 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 89 ವಿದ್ಯಾರ್ಥಿಗಳುಗೈರಾಗಿ 295 ಹಾಜರಾಗಿದ್ದರು.

ಎಸ್‌ಎಂಸಿ ಜೈನ್‌ ಶಾಲೆಯಲ್ಲಿ 180 ವಿದ್ಯಾರ್ಥಿಗಳಲ್ಲಿ 142 ಹಾಜರಾದರೆ, 38 ವಿದ್ಯಾರ್ಥಿಗಳು ಗೈರಾಗಿದ್ದರು.

‘ಕೋವಿಡ್‌–19 ಕಾರಣದಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. 32 ಬ್ಲಾಕ್‌ಗಳಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಮಾಸ್ಕ್‌, ಸ್ಯಾನಿಟೈಸರ್‌ ಕಡ್ಡಾಯಗೊಳಿಸಲಾಗಿತ್ತು. ಬೆಳಿಗ್ಗೆ 11ರಿಂದಲೇ ವಿವಿಧ ತಂಡಗಳನ್ನು ರಚಿಸಿ ವರದಿ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಲಾಗಿತ್ತು. ಅಂತರ ಕಾಯ್ದುಕೊಳ್ಳಲು ಗುರುತು ಹಾಕಲಾಗಿತ್ತು. ಆದರಂತೆ ವಿದ್ಯಾರ್ಥಿಗಳು ಹಾಜರಾಗಿದ್ದರು’ ಎಂದು ಪರೀಕ್ಷೆ ಕೇಂದ್ರ ಮುಖ್ಯ ನೋಡಲ್‌ ಅಧಿಕಾರಿ ರಾಜಶೇಖರ ಎಂ. ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT