ಜಿಲ್ಲೆಯಾದ್ಯಂತ ಸಂಭ್ರಮದ ಮಣ್ಣೆತ್ತಿನ ಅಮಾವಾಸ್ಯೆ

ಮಂಗಳವಾರ, ಜೂಲೈ 16, 2019
28 °C

ಜಿಲ್ಲೆಯಾದ್ಯಂತ ಸಂಭ್ರಮದ ಮಣ್ಣೆತ್ತಿನ ಅಮಾವಾಸ್ಯೆ

Published:
Updated:
Prajavani

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತಾಪಿ ಜನರು ಸಂಭ್ರಮದಿಂದ ಆಚರಿಸಿದರು.

ಜಿಲ್ಲೆಯ ಕೆಲ ದೇಗುಲಗಳಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರ, ಹಳ್ಳಿಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಲಾಯಿತು.

ರೈತರು ತಮ್ಮ ಮನೆಯ ದೇವರ ಜಗಲಿ ಮೇಲೆ ಇಟ್ಟು ತಾವು ತಯಾರಿಸಿದ ಹೋಳಿಗೆ, ಕಡುಬು, ಅನ್ನ ಇನ್ನಿತರ ಭಕ್ಷಗಳ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು.

ಜಿಲ್ಲೆಯ ಸುರಪುರ, ಶಹಾಪುರ, ಗುರುಮಠಕಲ್, ಹುಣಸಗಿ, ಕೆಂಭಾವಿ, ಯರಗೋಳ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !