ಯಾದಗಿರಿಯಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಮತ್ತು ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಮಾತನಾಡಿದರು
ಯಾದಗಿರಿಯಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಮತ್ತು ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿದ್ದ ಜನತೆ
‘ಗುರುಮಠಕಲ್ ಬಿಟ್ಟು ಬರಲ್ಲ’
ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಮಾತನಾಡಿ ‘ಮುಂದೇ ರಾಜ್ಯದಲ್ಲಿ ನಮ್ಮಸರ್ಕಾರ ಬರುತ್ತದೆ. ಕುಮಾರಣ್ಣ ಅವರು ಮುಖ್ಯಮಂತ್ರಿ ಆಗುತ್ತಾರೆ. ನನ್ನನ್ನು ಮಂತ್ರಿ ಮಾಡುವ ಬದಲು ನಮ್ಮ ಗೆಲುವಿಗೆ ಹಗಲಿರುಳು ದುಡಿದು ಏನೊಂದು ಆಸೆ ಪಡದ ಕಾರ್ಯಕರ್ತರ ಒಳಿತಿಗಾಗಿ ಸರ್ಕಾರದಿಂದ ಸಹಾಯ ಮಾಡಬೇಕು’ ಎಂದು ಮನವಿ ಮಾಡಿದರು. ಗುರುಮಠಕಲ್ ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ. ಇದ್ದರೂ ಅಲ್ಲಿಯೇ ಇರುತ್ತೇನೆ ಎಂದರು. ‘ಜಿಲ್ಲೆಯಲ್ಲಿ ಮೂರು ಕಡೆ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಹಲವಾರು ದಿನಗಳಿಂದ ಮುಖ್ಯಮಂತ್ರಿ ಪರಿಹಾರವೇ ಕೊಟ್ಟಿಲ್ಲ. ಮುಂದಿನ ಬಾರಿ ನಮ್ಮ 150 ಸೀಟು ಬರಬೇಕು’ ಎಂದರು.
‘ನಿಷ್ಠಾವಂತ ಅಧಿಕಾರಿಗಳಿಗೆ ಬೆಲೆ ಇಲ್ಲ’
ಯಾದಗಿರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ನೇಮಕಗೊಂಡು ಕೇವಲ 7 ತಿಂಗಳಲ್ಲಿ ಇಸ್ಪೀಟ್ ಮಟ್ಕಾ ಅಕ್ರಮ ಮರಳುಗಾರಿಕೆ ಹಾಗೂ ಕೋಳಿ ಅಂಕಣಗಳ ಮೇಲೆ ನಿಷೇಧ ಹೇರಿದ್ದರು. ಇದರಿಂದ ಕಾಂಗ್ರೆಸ್ ಪ್ರಭಾವಿ ಶಾಸಕರು ಕೆಲ ಹಿಂಬಾಲಕರು ಎಸ್ಪಿ ಅವರನ್ನು ವರ್ಗಾವಣೆ ಮಾಡಲು ಮುಂದಾಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಚಿತ್ತಾಪುರದಲ್ಲಿ ₹165 ಕೋಟಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ತನಿಖೆ ನಡೆಸಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.