ಶುಕ್ರವಾರ, ಜೂನ್ 25, 2021
22 °C

ಶನಿವಾರ ಸಂತೆ; ಕಾಣದ ‘ಅಂತರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯರಗೋಳ: ಗ್ರಾಮದಲ್ಲಿ ಶನಿವಾರ ಸಂತೆಯನ್ನು ರದ್ದುಗೊಳಿಸಿದ್ದರೂ ಮಾರುಕಟ್ಟೆ ಸ್ಥಳದಲ್ಲಿ ವ್ಯಾಪಾರಿಗಳು, ಜನರು ಭಾರಿ ಸಂಖ್ಯೆಯಲ್ಲಿ ಸೇರುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗುತ್ತಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಜನರನ್ನು ಚದುರಿಸಲು ಹರಸಾಹಸ ಪಡುವಂತಾಗಿದೆ.

ತರಕಾರಿ, ಹಣ್ಣು, ದಿನಸಿ, ಮಾಂಸ, ಬಟ್ಟೆ ವ್ಯಾಪಾರ ಮಾಡುತ್ತಿರುವ ದೃಶ್ಯಗಳು ಶನಿವಾರ ಕಂಡು ಬಂದವು. ಜನರು ವ್ಯಕ್ತಿಗತ ಅಂತರ ಮರೆತು ಖರೀದಿ ಮಾಡುತ್ತಿದ್ದವರು. ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ. ಹೊಟೇಲ್‌ಗಳು ಎಂದಿನಂತೆ ತೆರೆದಿದ್ದು, ಲಾಕ್‌ಡೌನ್ ನೆಪ ಮಾತ್ರ ಎನ್ನುವಂತಾಗಿದೆ.

ಪಿಡಿಒ ರಾಮು ಪವಾರ್ ಅವರು ಅನಾರೋಗ್ಯದ ಕಾರಣ ರಜೆಯಲ್ಲಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಕೋವಿಡ್ ಮಾರ್ಗಸೂಚಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾ.ಪಂ ಸದಸ್ಯರೊಬ್ಬರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು