‘ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಸೂಚನೆ’

7

‘ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಸೂಚನೆ’

Published:
Updated:
Deccan Herald

ಸುರಪುರ: ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಆಯೋಗದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಸೂಚಿಸಿದರು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸೆಕ್ಟರ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಚುನಾವಣಾ ಸಮಯದಲ್ಲಿ  ಅಕ್ರಮ ನಡೆಯಲು ಆಸ್ಪದ ಕೊಡಬಾರದು.  ಶಾಂತಿಯುತ ರೀತಿಯಲ್ಲಿ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.‌

‘ಚುನಾವಣಾ ನೀತಿ ಸಂಹಿತೆ ಆಗಸ್ಟ್‌ 2 ರಿಂದ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘಿಸುವ ರಾಜಕೀಯ ಪಕ್ಷಗಳು, ವ್ಯಕ್ತಿಗಳ ವಿರುದ್ಧ ನಿಯಮಗಳ ಅನುಸಾರ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಮತದಾರರ ಓಲೈಕೆಗೆ ಅಕ್ರಮವಾಗಿ ಮದ್ಯ, ಹಣ ಹಂಚುವುದು, ಜನರ ಮಧ್ಯೆ ಗಲಭೆ ಸೃಷ್ಟಿಸುವ ವ್ಯಕ್ತಿಗಳನ್ನು ಗುರುತಿಸಿ ಕಠಿಣ ಕ್ರಮ ಜರುಗಿಸಬೇಕು’ ಅಧಿಕಾರಿಗಳಿಗೆ ಸೂಚಿಸಿದರು.

ಸೆಕ್ಟರ್ ಅಧಿಕಾರಿಗಾಳಾದ ಉಮೇಶ ಕುದರಿ, ಡಾ. ಅನಂತಮೂರ್ತಿ, ಡಾ. ಸುರೇಶ ಹಚ್ಚಡ್, ಮಹದೇವ, ಜಯಾಚಾರ ಪುರೋಹಿತ,   ಅಶೋಕ ಸುರಪುರ ಯದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !