ಗುರುವಾರ , ಜುಲೈ 29, 2021
21 °C
30,31 ರಂದು ಸಿಇಟಿ ಪರೀಕ್ಷೆ, 8 ಪರೀಕ್ಷಾ ಕೇಂದ್ರಗಳು

ಸಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಲ್ಲಿ 2,280 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಯಾದಗಿರಿಯಲ್ಲಿ 5, ಶಹಾಪುರದಲ್ಲಿ 2 ಮತ್ತು ಸುರಪುರದಲ್ಲಿ 1 ಪರೀಕ್ಷಾ ಕೇಂದ್ರ ಇದ್ದು, ಪ್ರತಿ ಕೋಣೆಗೆ 24 ವಿದ್ಯಾರ್ಥಿಗಳಂತೆ ಆಸನದ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾಹಿತಿ ನೀಡಿದ್ದಾರೆ.

ಜುಲೈ 30 ಮತ್ತು 31 ರಂದು ನಡೆಯುವ ಸಿಇಟಿ ಪರೀಕ್ಷೆಗಾಗಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜತೆ ನಡೆದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅವರು ಇದನ್ನು ತಿಳಿಸಿದ್ದಾರೆ.

ನಂತರ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸುವ ಬಗ್ಗೆ ಅಧಿಕಾರಿ ಮತ್ತು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಸೂಕ್ತ ಬಂದೋಬಸ್ತ್ ಬಗ್ಗೆ ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿಲ್ಲೆಯಲ್ಲಿ ನಡೆಯುವ 8 ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲ್ಲಾ ಕೇಂದ್ರಗಳಿಗೆ ಎಸ್‍ಓಪಿಯಂತೆ ಪ್ರತಿ ಪರೀಕ್ಷಾ ಕೇಂದ್ರವನ್ನು ಮೂರು ದಿನ ಮೊದಲು ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು.

ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಲು ಮತ್ತು ಆಯಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸರಬರಾಜು ಮಾಡಲು ಹಾಗೂ ಥರ್ಮಲ್ ಸ್ಕ್ಯಾನರ್ ಉಪಯೋಗ ಮಾಡಲು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಈ ವೇಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.