ವಡಗೇರಾ: ‘ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ನರೇಗಾ ಯೋಜನೆ ಸಹಕಾರಿಯಾಗಿದೆ ಇದರಿಂದ ಶಾಲೆಯ ಸೌಂದರ್ಯ, ಸ್ವಚ್ಛತೆಯ ಜತೆಗೆ ಶಾಲಾ ಕ್ರೀಡಾಪಟುಗಳಿಗೆ ಉತ್ತೇಜನ ಸಿಗಲಿದೆ’ ಎಂದು ಸಹಾಯಕ ನಿರ್ದೇಶಕ ಶಶಿಧರ ಹಿರೇಮಠ ಹೇಳಿದರು.

ತಾಲ್ಲೂಕಿನ ಟಿ.ವಡಗೇರಾ ಗ್ರಾ.ಪಂ ವ್ಯಾಪ್ತಿಯ ಅನವಾರ, ಐಕೂರು-ಬಸವಂತಪುರು ಹಾಗೂ ಗುಲಸರಂ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ನರೇಗಾ ಯೋಜನೆಯಡಿ ಕೊಕ್ಕೊ, ವಾಲಿಬಾಲ್ ಹಾಗೂ ಕಬಡ್ಡಿ ಮೈದಾನ, ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

‘ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಓರಡಿಯಾ ಹಾಗೂ ತಾ.ಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಅವರ ಆದೇಶದಂತೆ, ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಂಪೌಂಡ್, ಶೌಚಾಲಯ, ಕ್ರೀಡಾಂಗಣ, ಅಡುಗೆ ಕೋಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ಅನವಾರ ಗ್ರಾಮದಲ್ಲಿ ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರ ಮನವಿ ಮೇರೆಗೆ ಕೊಕ್ಕೊ ಆಟದ ಮೈದಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ತಾಲ್ಲೂಕಿನ ಗುಲಸರಂ ಹಾಗೂ ಐಕೂರು ಗ್ರಾ.ಪಂ ವ್ಯಾಪ್ತಿಯ ಬಸವಂತಪುರ ಗ್ರಾಮದ ಶಾಲೆಯಲ್ಲಿ ₹4 ಲಕ್ಷ ವೆಚ್ಚದ ಶೌಚಾಲಯ ಕಾಮಗಾರಿ ಪ್ರಾರಂಭಿಸಲು ಮಾರ್ಕೌಟ್ ಮಾಡಲಾಯಿತು.

ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇನ್ನೂ ಶಾಲೆಯ ಅಡುಗೆ ಕೋಣೆ, ಆಟದ ಮೈದಾನ ಕಾಮಗಾರಿಯನ್ನು ಕೂಡ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಪಿಡಿಒ ಸಿದ್ದವೀರಪ್ಪ ಹೇಳಿದರು.

ಪಿಡಿಒ ಕಿರಣಬಾಬು, ತಾಂತ್ರಿಕ ಸಹಾಯಕ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಇ ಬಾಸ್ಕರ ರಾವ್, ಮೋಹಿತ, ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.