ಶುಕ್ರವಾರ, ಮೇ 7, 2021
19 °C

ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ: ಸಂಗೀತ.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನನಗೆ ಆರಂಭದಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕೊರೊನಾ ಪರೀಕ್ಷೆಗೆ ನಿಯೋಜಿಸಿದಾಗ ತುಂಬಾ ಭಯವಿತ್ತು. ಹಲವು ದಿನಗಳ ನಂತರ ಆತಂಕ ಕಾಡಲಿಲ್ಲ. ಅತ್ಯಂತ ಸಂಕಷ್ಟದ ಸಮಯವಾಗಿರುವ ಈ ಸಂದರ್ಭದಲ್ಲಿ ನನ್ನ ಕರ್ತವ್ಯ ನೆನಪಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ‘ಕೊರೊನಾ ವಾರಿಯರ್’ ಎಂಬ ಪದವೇ ನಮ್ಮನ್ನು ಉತ್ತೇಜಿಸುತ್ತಿದೆ.

ಈ ಹಿಂದೆಯು ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದೇನೆ. ಕೊರೊನಾ ಮೊದಲನೇ ಅಲೆಗೆ ಹೋಲಿಸಿದರೆ ಈಗ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ. ಆದರೆ ನಮ್ಮಲ್ಲಿನ ಒತ್ತಡ, ಸಮಸ್ಯೆ, ಸವಾಲುಗಳ ಬಗ್ಗೆ ಹೊರಗಿನವರಿಗೆ ಅರ್ಥವಾಗವುದಿಲ್ಲ. ಮನೆ, ಕುಟುಂಬದ ಸದಸ್ಯರು, ಸಂಬಂಧಿಗಳು ಮತ್ತು ಸ್ನೇಹಿತರನ್ನು ಮರೆತು ಕಾರ್ಯನಿರ್ವಹಿಸುತ್ತಿದ್ದೇವೆ.

ಕೊರೊನಾ ಕುರಿತು ಜನರು ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಕಡ್ಡಾಯವಾಗಿ  ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು. ಜನರು ಇಷ್ಟು ಮಾಡಿದರೆ ಸಾಕು, ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೂ, ಆರೋಗ್ಯ ಸಿಬ್ಬಂದಿಗೂ ಸಹಕಾರಿಯಾಗಲಿದೆ.

ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೊಗಳ ಕಡೆ ಗಮನ ಕೊಡದೆ, ಪೊಲೀಸ್ ಇಲಾಖೆ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಅಧಿಕಾರಿಗಳಿಗೆ ಸಹಕಾರ ನೀಡಬೇಕು.

-ಸಂಗೀತಾ ಮುರಾಳ, ಶುಶ್ರೂಷಕಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಂಭಾವಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು