ರೈತಪರ ಕೆಲಸ ಮಾಡಿ: ಗಂಗಾಧರ ಶ್ರೀ ಸಲಹೆ

7

ರೈತಪರ ಕೆಲಸ ಮಾಡಿ: ಗಂಗಾಧರ ಶ್ರೀ ಸಲಹೆ

Published:
Updated:
Deccan Herald

ಯಾದಗಿರಿ: ‘ರೈತರು ಕೃಷಿಯನ್ನೇ ಅನಿವಾರ್ಯವಾಗಿ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಅವರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ರೈತರಿಗೆ ಪೂರಕವಾಗಿ ಕೆಲಸ ಮಾಡಿ’ ಎಂದು ಅಬ್ಬೆತುಮಕೂರಿನ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಸಲಹೆ ನೀಡಿದರು.

ಅಬ್ಬೆತುಮಕೂರಿನ ಸಿದ್ದಸಂಸ್ಥಾನ ಮಠಕ್ಕೆ ಭಾನುವಾರ ಭೇಟಿ ನೀಡಿದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷ ಶರಣಗೌಡ ಕಾಳೆಬೆಳಗುಂದಿ ಅವರನ್ನು ಆಶೀರ್ವದಿಸಿ ಅವರು ಮಾತನಾಡಿದರು.

‘ಕೃಷಿ ಕ್ಷೇತ್ರ ಪವಿತ್ರವಾದುದು. ನಿಮಗೆ ರೈತರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆಡಳಿತ ನೀಡಿ ರೈತರ ಪ್ರೀತಿಗೆ ಪಾತ್ರಾರಾಗಿ’ ಎಂದು ಹಾರೈಸಿದರು.

ಶ್ರೀಗಳಿಂದ ಆಶೀರ್ವಾದ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷ ಶರಣಗೌಡ ಕಾಳೆಬೆಳಗುಂದಿ,‘ವಿಶ್ವಾರಾಧ್ಯರ ಕೃಪೆಯಿಂದ ಅಧ್ಯಕ್ಷ ಸ್ಥಾನ ಲಭಿಸಿದೆ. ಆದ್ದರಿಂದ, ರೈತರ ಏಳಿಗೆಗಾಗಿಯೇ ದುಡಿಯುವೆ’ ಎಂದರು.

ರಮೇಶ ದೊಡ್ಮನಿ, ಆರ್.ವಿಶ್ವನಾಥರೆಡ್ಡಿ ಅಬ್ಬೆತುಮಕೂರ, ಶರಣಗೌಡ ಗೋಗಿ, ಶಿವು ಅರಕೇರಿ, ವೆಂಕಟರೆಡ್ಡಿ ಹತ್ತಿಕುಣಿ, ಅಭಿಲಾಷ ಪಾಟೀಲ್, ಅಮರೇಶ ಮನಗನಾಳ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !