ಗುರುವಾರ , ಆಗಸ್ಟ್ 5, 2021

ಕೊರೊನಾ ವಾರಿಯರ್ಸ್‌ಗಳಸೇವೆ ಶ್ಲಾಘನೀಯ: ಮುದ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕೋವಿಡ್‌ ಸೋಂಕಿತರ ಸೇವೆಯಲ್ಲಿ ತೊಡಗಿಕೊಂಡಿರುವ ವೈದ್ಯರ, ಸಿಬ್ಬಂದಿ ಸೇವೆ ಶ್ಲಾಘನೀಯ ಎಂದು ಬಿಜೆಪಿ ಯುವ ಮುಖಂಡ ಮಹೇಶಗೌಡ ಮುದ್ನಾಳ ಶ್ಲಾಘಿಸಿದರು.

ನಗರ ಹೊರವಲಯದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಆರೋಗ್ಯ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ರೋಗಿಗಳನ್ನು ವೈರಸ್‌ನಿಂದ ಮುಕ್ತಿಗೊಳಿಸಲು ಕೊರೊನಾ ವಾರಿಯರ್ಸ್ ತಮ್ಮ ಜೀವದ ಹಂಗು ತೊರೆದು ಹರಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರನ್ನು ಪ್ರತಿಯೊಬ್ಬರು ಗುರುತಿಸಿ ಗೌರವಿಸುವುದು ನಾಗರಿಕರ ಕರ್ತವ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುಧೀರ್ ಪಾಟೀಲ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್, ಮೇಲ್ವಿಚಾರಕ ಶ್ರೀನಿವಾಸ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು