ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ - ಜೆಡಿಎಸ್‌ ಮೈತ್ರಿಗೆ ಒಲಿಯದ ಗೆಲುವು

ವಿಜಯವಾಗಿ ‍ಪರಿವರ್ತನೆಯಾಗದ ಜೆಡಿಎಸ್‌–ಬಿಜೆಪಿ ಸಖ್ಯ
Published 8 ಜೂನ್ 2024, 6:39 IST
Last Updated 8 ಜೂನ್ 2024, 6:39 IST
ಅಕ್ಷರ ಗಾತ್ರ

ಯಾದಗಿರಿ: ಚುನಾವಣಾ ಪೂರ್ವ ಬಿಜೆಪಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡರೂ ಜಿಲ್ಲೆಯಲ್ಲಿ ಸುರಪುರ ಉಪ ಚುನಾವಣೆ, ಎರಡು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಜಯವಾಗಿದೆ.

ಜಿಲ್ಲೆಯಲ್ಲಿ ನಾಲ್ಕು ಮತಕ್ಷೇತ್ರಗಳಿದ್ದು, ಮೂರು ಕಡೆ ಕಾಂಗ್ರೆಸ್‌ ಒಂದು ಜೆಡಿಎಸ್‌ ಶಾಸಕರಿದ್ದಾರೆ. ಜಿಲ್ಲೆಯೂ ರಾಯಚೂರು ಮತ್ತು ಕಲಬುರಗಿ ಲೋಕಸಭೆ ಕ್ಷೇತ್ರಗಳನ್ನು ಒಳಗೊಂಡಿದ್ದು, ಮೈತ್ರಿಗೆ ಗೆಲುವು ದಕ್ಕಿಲ್ಲ.

ಜಿಲ್ಲೆಯ ಸುರಪುರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ, ರಾಯಚೂರು ಸಂಸದರಾಗಿ ಜಿ.ಕುಮಾರನಾಯಕ, ಕಲಬುರಗಿ ಸಂಸದರಾಗಿ ರಾಧಾಕೃಷ್ಣ ದೊಡಮನಿ ಅವರು ಆಯ್ಕೆಯಾಗಿದ್ದಾರೆ. ಆದರೆ, ಗುರುಮಠಕಲ್‌ ಬಿಟ್ಟರೆ ಬೇರೆಡೆ ಬಿಜೆಪಿಗೆ ಲೀಡ್‌ ಸಿಕ್ಕಿಲ್ಲ.

ಮತಗಳ ವಿವರ:

ರಾಯಚೂರು ಲೋಕಸಭೆ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದರೆ, ಕಲಬುರಗಿ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಸುರಪುರ ಮತಕ್ಷೇತ್ರ ಎಸ್‌ಟಿಗೆ ಮೀಸಲಾಗಿದೆ.

ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಹಾಪುರದಲ್ಲಿ ಕಾಂಗ್ರೆಸ್‌ನ ಜಿ.ಕುಮಾರ ನಾಯಕಗೆ 9,585 ಲೀಡ್‌ ಸಿಕ್ಕಿದೆ. ಸುರಪುರದಲ್ಲಿ 16,560, ಯಾದಗಿರಿ ಮತಕ್ಷೇತ್ರದಲ್ಲಿ 5,722 ಲೀಡ್‌ ದೊರಕಿದೆ.

ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್‌ ಮತಕ್ಷೇತ್ರದಲ್ಲಿ ಬಿಜೆಪಿಗೆ 16,402 ಲೀಡ್‌ ಸಿಕ್ಕಿದೆ. ಇನ್ನೂ ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ 18,320 ಲೀಡ್ ದೊರಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT