ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆ ವೈಷಮ್ಯ: ವ್ಯಕ್ತಿ ಮೇಲೆ ಹಲ್ಲೆ

Published 12 ಮೇ 2024, 16:08 IST
Last Updated 12 ಮೇ 2024, 16:08 IST
ಅಕ್ಷರ ಗಾತ್ರ

ಯಾದಗಿರಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಸೈದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸಾಬಣ್ಣ ಅನಂಪಲ್ಲಿ ಹಲ್ಲೆಗೆ ಒಳಗಾದವರು. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪತ್ನಿ ವೆಂಕಟಮ್ಮ ದೂರು ನೀಡಿದ್ದಾರೆ. 23 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಏಪ್ರಿಲ್ 26ರಂದು ಗ್ರಾಮದಲ್ಲಿ ಮದುವೆ ಮೆರವಣಿಗೆ ವೇಳೆ ಕುರುಬ ಮತ್ತು ಕಬ್ಬಲಿಗ ಸಮಾಜದ ಮಧ್ಯೆ ಗಲಾಟೆ ನಡೆದಿತ್ತು. ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಸಾಬಣ್ಣ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಪತ್ನಿ ದೂರು ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ಸಾಬಣ್ಣನ ಮೇಲೆ ಹಲ್ಲೆ ಮಾಡಲಾಗಿತ್ತು. ಬಡಿಗೆ.ಕಾರದಪುಡಿ, ಹಾಕಿ ಸ್ಟಿಕ್‌ನಿಂದ ಹಲ್ಲೆ ಮಾಡಲಾಗಿದೆ. ಗಾಯಾಳುವನ್ನು ಮೊದಲು ಸೈದಾ‍ಪುರ ‍ಪ‍್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ನಂತರ ರಾಯಚೂರಿನ ರಿಮ್ಸ್‌ಗೆ ದಾಖಲಿಸಲಾಗಿದೆ.

ಮಾಜಿ ಸಚಿವರ ಮನೆಯಲ್ಲಿ ಕಳವು: ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಅವರ ಮನೆಯಲ್ಲಿ ಟಿವಿ ಕಳ್ಳತನವಾಗಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ, ಈ ಬಗ್ಗೆ ದೂರು ದಾಖಲಾಗಿಲ್ಲ. ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT