ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 20ರಂದು ಬಿಳ್ಹಾರ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಬಿಳ್ಹಾರದಲ್ಲಿ ಸಮಸ್ಯೆ ಆಲಿಸಲಿರುವ ಡಾ.ರಾಗಪ್ರಿಯಾ; ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿ
Last Updated 20 ಮಾರ್ಚ್ 2021, 3:05 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಧಿಕಾರಿ ನಡೆ, ಹಳ್ಳಿಕಡೆ ಎಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲೆಯ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ಸರ್ಕಾರ ಸೂಚಿಸಿದ್ದು, ಮಾ.20 ರಂದು ವಡಗೇರಾ ತಾಲ್ಲೂಕಿನ ಬಿಳ್ಹಾರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುವುದಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ರಿಂದಸಂಜೆ5 ಗಂಟೆವರೆಗೆ ಗ್ರಾಮವಾಸ್ತವ್ಯ ನಡೆಸಲಿದ್ದು, ಪ್ರಮುಖವಾಗಿ ಕಂದಾಯ ಇಲಾಖೆಯ ಸಮಸ್ಯೆಗಳ ಪರಿಹರಿಸಲಾಗುವುದು ಎಂದಿದ್ದಾರೆ.

ಬಿಳ್ಹಾರ ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಅದೇ ದಿನ ಇನ್ನುಳಿದ ತಾಲ್ಲೂಕುಗಳಲ್ಲಿ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು
ತಿಳಿಸಿದರು.

ಪಹಣಿಯಲ್ಲಿನ ಲೋಪದೋಷಗಳ ಸರಿಪಡಿಸುವಿಕೆ, ಆಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು, ಪೌತಿ ಖಾತೆಯಲ್ಲಿ ನೈಜ ವಾರಸುದಾರರ ಹೆಸರು ಸೇರ್ಪಡೆ, ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ, ಸ್ಮಶಾನ ಜಾಗ ಲಭ್ಯತೆ ಬಗ್ಗೆ ಪರಿಶೀಲಿಸುವುದು, ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನಿನ ಕಾಯ್ದಿರಿಸಲು ಕ್ರಮ ವಹಿಸುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಆಧಾರ್‌ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಅರ್ಹ ಅಂಗವಿಕಲ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಹದ್ದುಬಸ್ತು, ಪೋಡಿ, ಪೋಡಿಮುಕ್ತ ಗ್ರಾಮ, ದರಕಾಸ್ತು ಪೋಡಿ ಕಂದಾಯ ಗ್ರಾಮಗಳ ರಚನೆ ಮುಂತಾದ ಕಂದಾಯ ಇಲಾಖೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.

ಸುರಪುರ ತಾಲ್ಲೂಕಿನ ತಿಂಥಣಿ, ಹುಣಸಗಿ ತಾಲ್ಲೂಕಿನ ಕೋಳಿಹಾಳ, ಯಾದಗಿರಿ ತಾಲ್ಲೂಕಿನ ಕಂಚಗಾರಹಳ್ಳಿ, ಗುರುಮಠಕಲ್ ತಾಲ್ಲೂಕಿನ ಎಂ.ಟಿ. ಪಲ್ಲಿ, ಶಹಾಪುರ ತಾಲ್ಲೂಕಿನ ತಂಗಡಗಿ ಹಳ್ಳಿಗಳಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಿಂಥಣಿ‌‌

ಕಕ್ಕೇರಾ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ (ಮಾ.20) ತಿಂಥಣಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 10ಗಂಟೆಯಿಂದ ಸಾಯಂಕಾಲ 5ರವರೆಗೆ ಗ್ರಾಮವಾಸ್ತವ್ಯ ಜರುಗಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸುವುದರಿಂದ ಸಾರ್ವಜನಿಕರು ತಮ್ಮ ಜಮೀನುಗಳ ತಕರಾರು ಹಾಗೂ ಇನ್ನಿತರ ಸಮಸ್ಯೆಗಳಿದ್ದಲ್ಲಿ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ತಂಗಡಗಿ

ಶಹಾಪುರ: ತಾಲ್ಲೂಕಿನ ದೋರನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ತಂಗಡಗಿ ಗ್ರಾಮದಲ್ಲಿ ಶನಿವಾರ (ಮಾ.20) ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜನತೆ ಆಗಮಿಸಿ ತಮ್ಮ ಸಮಸ್ಯೆ ಹಾಗೂ ಅಹವಾಲು ಸಲ್ಲಿಸಬಹುದು ಎಂದು ಕಂದಾಯ ಇಲಾಖೆಯ ಪ್ರಕಟಣೆಯಲ್ಲಿ
ತಿಳಿಸಿದೆ.

‘ಸಮಸ್ಯೆ ಪರಿಹರಿಸಲು ಗ್ರಾಮವಾಸ್ತವ್ಯ’

ವಡಗೇರಾ: ಬಹುದಿನಗಳ ಹಿಂದಿನಿಂದಲೂ ಸಮಸ್ಯೆಗಳಿಗೆ ಸಿಗದ ಪರಿಹಾರಕ್ಕೆ ಮತ್ತು ಸಾರ್ವಜನಿಕರ ಪಹಣಿ, ಮಾಸಾಶನ, ಪಿಂಚಣಿ, ಮೂಲಭೂತ ಸೌಕರ್ಯಗಳ ಸಮಸ್ಯೆ ಸೇರಿದಂತೆ ಇತರೆ ಸಮಸ್ಯೆಗಳ ಪರಿಹಾರಕ್ಕಾಗಿಜಿಲ್ಲಾಧಿಕಾರಿಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ತಹಶೀಲ್ದಾರ್‌ಸುರೇಶ ಅಂಕಲಗಿ ಹೇಳಿದರು.

ತಾಲ್ಲೂಕಿನ ಬಿಳ್ಹಾರ ಗ್ರಾಮದಲ್ಲಿ ಮಾ.20 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕುರಿತು ಶುಕ್ರವಾರ ಗ್ರಾಮದಲ್ಲಿ ಅಭಿಯಾನ ಮತ್ತು ಪೂರ್ವಭಾವಿ ಸಭೆ ಹಾಗೂತಯಾರಿ ಪರಿಶೀಲಿಸಿಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಅರ್ಜಿಗಳ ಮೂಲಕ ಮನವಿ ಮಾಡಿ ಪರಿಹಾರ ಪಡೆಯಬೇಕು. ನಿಮ್ಮ ಗ್ರಾಮದಲ್ಲಿ ಪಹಣಿ ಪೋಡಿ, ನೀರಿನ ಸಮಸ್ಯೆ, ರಸ್ತೆ, ಸ್ಮಶಾನ ಸಮಸ್ಯೆ ಸೇರಿದಂತೆ ಕಂದಾಯ ಇಲಾಖೆಯ ಸೇವೆ ಪಡೆಯಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಶಿರಸ್ತೇದಾರ ಸಂಗಮೇಶ ದೇಸಾಯಿ, ಕಂದಾಯ ನಿರೀಕ್ಷಕ ಸಂಜುಕುಮಾರ ಕಾವಲಿ, ಗ್ರಾಮ ಲೆಕ್ಕಿಗರಾದ ಲಕ್ಷ್ಮಿ ಪತ್ತಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT