ಕೆಂಭಾವಿ: ‘ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂಬ ನಟ ಕಮಲಹಾಸನ್ ಹೇಳಿಕೆ ಅತ್ಯಂತ ಖಂಡನೀಯ’ ಎಂದು ವಲಯ ಕಸಾಪ ಅಧ್ಯಕ್ಷ ಮಡಿವಾಳಪ್ಪ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಈ ಕುರಿತು ಹೇಳಿಕೆ ನೀಡಿದ ಅವರು, ‘ಒಬ್ಬ ಸ್ಟಾರ್ ನಟನಾಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ ಕಾರಣವಾಗುವುದಿಲ್ಲ ಎಂಬುದನ್ನು ಕಮಲಹಾಸನ ಮನದಟ್ಟು ಮಾಡಿಕೊಳ್ಳಬೇಕು. ಕನ್ನಡ ಭಾಷೆಯ ಗಂಧಗಾಳಿ ಗೊತ್ತಿಲ್ಲದ ಒಬ್ಬ ತಮಿಳುನಟನ ಈ ಹೇಳಿಕೆ ಇಡೀ ಕನ್ನಡಿಗರಿಗೆ ತೀವ್ರ ನೋವುಂಟು ಮಾಡಿದೆ’ ಎಂದಿದ್ದಾರೆ.

‘ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ತಮಿಳು ಮತಗಳ ಮೇಲೆ ಕಣ್ಣಿಟ್ಟಿರುವ ಇವರು ಅನ್ಯ ಭಾಷೆಗಳ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ. ಈ ಬಗ್ಗೆ ಎಲ್ಲ ಕನ್ನಡ ಮನಸುಗಳು ಒಂದಾಗಿ ಹೇಳಿಕೆಯನ್ನು ಖಂಡಿಸಿ ಕರ್ನಾಟಕದಲ್ಲಿ ಇವರ ಒಂದೂ ಚಲನಚಿತ್ರ ಪ್ರದರ್ಶನವಾಗದಂತೆ ಸರ್ಕಾರದ ಮೇಲೆ ಮತ್ತು ಚಿತ್ರ ರಂಗದ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.