ಹುಣಸಗಿ: ಇಲ್ಲಿನ ಯುಕೆಪಿ ಕ್ಯಾಂಪಿನ ಪ್ರದೇಶದಲ್ಲಿರುವ ಹುಣಸಗಿ ತಹಶೀಲ್ದಾರ್ ಕಚೇರಿಯನ್ನು ಬೇರೆ ಕಡೆಗೆ ಸ್ಥಳಾಂತರಿಸಬಾರದು ಎಂದು ಭ್ರಷ್ಟಾಚಾರ ವಿರೋಧಿ ದಳದ ಜಿಲ್ಲಾ ಘಟಕ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೇಕಪ್ಪಗೋಳ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಸದ್ಯ ಕಾರ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ಕಚೇರಿಯು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳು ಹಾಗೂ ರೈತಾಪಿ ಜನರಿಗೆ ಅನುಕೂಲವಾಗಿದೆ. ಬೇರೆ ಕಡೆ ಸ್ಥಳಾಂತರಿಸಿದರೆ ಜನರಿಗೆ ಅನಾನುಕೂಲ ಆಗಲಿದೆ ಎಂದರು.
ಒಂದು ವೇಳೆ ಸ್ಥಳಾಂತರಕ್ಕೆ ಪ್ರಯತ್ನಿಸಿದರೆ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಕಾಶಿನಾಥ ಹಾದಿಮನಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಕಾಮನಟಗಿ ತಿಳಿಸಿದ್ದಾರೆ.