ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿಯಲ್ಲಿ ಡಿ.7ರಿಂದ ಸಾವಯವ, ಸಿರಿಧಾನ್ಯಗಳ ಮೇಳ

Last Updated 5 ಡಿಸೆಂಬರ್ 2022, 16:09 IST
ಅಕ್ಷರ ಗಾತ್ರ

ಯಾದಗಿರಿ: ನಗರದಲ್ಲಿ ಡಿಸೆಂಬರ್ 7 ಮತ್ತು 8ರಂದು ಸಾವಯವ ಹಾಗೂ ಸಿರಿಧಾನ್ಯಗಳ ಮೇಳ ಆಯೋಜಿ ಸಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ಎಸ್‌.ಎಸ್‌.ಆಬಿದ್‌ ತಿಳಿಸಿದರು.

ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಸಾವಯವ ಉತ್ಪನ್ನಗಳ ಹಾಗೂ ಸಿರಿಧಾನ್ಯಗಳ ಕುರಿತು ರೈತರಿಗೆ ಮತ್ತು ಗ್ರಾಹಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 11 ಗಂಟೆಗೆ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ನಡೆದ ಸುದ್ದಿಗೋ ಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮೇಳವನ್ನು ಉದ್ಘಾಟಿಸ ಲಿದ್ದಾರೆ. ಶಾಸಕ ವೆಂಕಟರೆಡ್ಡಿ ಮುದ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯಮಟ್ಟದಲ್ಲಿ ಮೇಳ ನಡೆದಿದ್ದು, ಡಿಸೆಂಬರ್ 7ರಂದು ಉದ್ಘಾಟನೆ, 8ರಂದು ಸಿರಿಧಾನ್ಯಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಡಿಸೆಂಬರ್ 7ರಂದು ಬೆಳಿಗ್ಗೆ 7ಗಂಟೆಗೆ ಸಿರಿಧಾನ್ಯ ಕಡೆ ನಮ್ಮ ನಡಿಗೆ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೊಸ ಬಸ್ ನಿಲ್ದಾಣದಿಂದ ಸುಭಾಷ್‌ ವೃತ್ತ, ಪದವಿ ಕಾಲೇಜು ಮೂಲಕ ಬಾಲಾಜಿ ಕಲ್ಯಾಣ ಮಂಟಪ ಗ್ರಾಮೀಣ ಪೊಲೀಸ್ ಠಾಣೆಯ ಹತ್ತಿರ ವರೆಗೆ ನಡಿಗೆ ನಡೆಯಲಿದೆ ಎಂದು ತಿಳಿಸಿದರು.

ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಇದನ್ನು ರೈತರು ಉಪಯೋಗಿ ಸಿಕೊಳ್ಳ ಬೇಕೆಂದು ತಿಳಿಸಿದರು. ಸಿರಿಧಾನ್ಯಗಳ ಸಂಸ್ಕರಣೆಯ ಕುರಿತು ಈಗಾಗಲೇ ತರಬೇತಿ ನೀಡಲಾಗಿದ್ದು, ಜಿಲ್ಲೆಯ 3 ಕಡೆ ಸಂಸ್ಕರಣ ಘಟಕ ಸ್ಥಾಪನೆ ಮಾಡಲಾಗಿದೆ. ಶಹಾಪುರ ತಾಲ್ಲೂಕಿನ ವನದುರ್ಗ, ಸುರಪುರ ಮತ್ತು ಗುರುಮಠಕಲ್‌ ತಾಲ್ಲೂಕಿನ ಗಾಜರಕೋಟದಲ್ಲಿ ಸಂಸ್ಕರಣ ಘಟಕ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ಪರ್ಯಾಯ ಬೆಳೆ ಬೆಳೆಯಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಣ್ಣಿನ ಸವಕಳಿ ಹೆಚ್ಚಿದ್ದು, 1 ಕೆಜಿ ಮಣ್ಣಿನಲ್ಲಿ 50 ಗ್ರಾಂ ಸಾವಯವ ಅಂಶ ಇರಬೇಕು. ಆದರೆ, ನಮ್ಮ ಜಿಲ್ಲೆಯಲ್ಲಿ 1.5 ಕೂಡ ಇಲ್ಲದಂತ ಪರಿಸ್ಥಿತಿ ಆಗಿದೆ. ಇನ್ನು 40 ವರ್ಷಗಳಲ್ಲಿ ಸವಳು, ಜವಳು ಭೂಮಿ ಹೆಚ್ಚಾಗುವ ಸಾಧ್ಯತೆ ಇದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಹೆಚ್ಚಾಗಿ ಬೆಳೆಯುತ್ತಿದ್ದರಿಂದ ಏಕ ಬೆಳೆ ಪದ್ಧತಿಯಿಂದ ಭೂಮಿ ಸವಳು ಜವಳಾಗುತ್ತದೆ. ಹೀಗಾಗಿ ಲಘು ಬೆಳೆಗಳು, ವಾಣಿಜ್ಯ ಬೆಳೆಗಳನ್ನು ಪರ್ಯಾಯವಾಗಿ ಬೆಳೆದರೆ ಮಾತ್ರ ಪೋಷಕಾಂಶಗಳು ಉಳಿಯಲು ಸಾಧ್ಯ ಎಂದು ತಿಳಿಸಿದರು. ತಾಂತ್ರಿಕ ಕೃಷಿ ಅಧಿಕಾರಿ ರಾಜಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT