ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡೂ ಹಾಸ್ಟೆಲ್‌ಗಳಿಗಿಲ್ಲ ಸ್ವಂತ ಕಟ್ಟಡ!

ಕ್ರೀಡಾ ಸಾಮಗ್ರಿ, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳಿಗಾಗಿ ವಿದ್ಯಾರ್ಥಿಗಳ ಬೇಡಿಕೆ
Last Updated 29 ಡಿಸೆಂಬರ್ 2022, 4:33 IST
ಅಕ್ಷರ ಗಾತ್ರ

ಹುಣಸಗಿ: ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎರಡು ವಸತಿ ನಿಲಯಗಳು ಕಾರ್ಯನಿ ರ್ವಹಿಸುತ್ತಿವೆ. ಎರಡಕ್ಕೂ ಸ್ವಂತ ಕಟ್ಟಡ ವಿಲ್ಲ. ಹಲವಾರು ವರ್ಷಗಳಿಂದಲೂ ಖಾಸಗಿ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ.

ಇದರಿಂದಾಗಿ ನೂರಾರು ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟದ ಮೂಲ ಸೌಕರ್ಯಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
‘ಗ್ರಾಮೀಣ ಭಾಗದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಾರೆ. ಆದರೆ, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ’ ಎಂದು ಕೆಲ ಪಾಲಕರು ದೂರಿದರು.
ಹತ್ತು ವರ್ಷಗಳ ಹಿಂದೆ ಅಂದರೆ 2012 ರಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮೆಟ್ರಿಕ್ ನಂತರದ ವಸತಿ ನಿಲಯ ಆರಂಭಿಸಿತು. ಆದರೆ, ಇಂದಿನವರೆಗೂ ಸ್ವಂತ ಕಟ್ಟಡದ ವ್ಯವಸ್ಥೆ ಇಲ್ಲ. ಈ ವಸತಿ ನಿಲಯದಲ್ಲಿ ಸುಮಾರು 100 ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಹಾಸಿಗೆ, ಹೊದಿಕೆ ಜತೆಯಲ್ಲಿ ತಿಂಗಳಿಗೊಮ್ಮೆ ಅಗತ್ಯ ಕಿಟ್ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
‘ನಮ್ಮ ವಸತಿ ನಿಲಯಲ್ಲಿರುವ ಗ್ರಂಥಾಲಯದಲ್ಲಿ ಪುಸ್ತಕಗಳ ವ್ಯವಸ್ಥೆ ಇದೆ. ಆದರೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಂತಾಗಲು ಅಗತ್ಯ ಪುಸ್ತಕ ಹಾಗೂ ಗ್ರಂಥಗಳ ವ್ಯವಸ್ಥೆ ಕಲ್ಪಿಸಬೇಕು’ ಎನ್ನುತ್ತಾರೆ ವಿದ್ಯಾರ್ಥಿಗಳಾದ ಪರಮಣ್ಣ ಸಿದ್ದಾಪುರ ಹಾಗೂ ಜಟ್ಟೆಪ್ಪ.
‘ನಮ್ಮ ವಸತಿ ನಿಲಯದಲ್ಲಿ 5 ಜನ ಅಡುಗೆ ಸಿಬ್ಬಂದಿ ಕಾರ್ಯ ನಿರ್ವ ಹಿಸುತ್ತಿದ್ದು, ಊಟದ ಮೆನು ಪ್ರಕಾರವೇ ನಿತ್ಯ ಗುಣಮಟ್ಟದ ಅಡುಗೆ ತಯಾರಿಸಿ ನೀಡುತ್ತಿದ್ದಾರೆ’ ಎಂದು ನಿಲಯ ಮೇಲ್ವಿಚಾರಕ ನಾಗೇಶ ಹೇಳಿದರು. ಹುಣಸಗಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಊಟ ಸೇರಿ ಎಲ್ಲ ವ್ಯವಸ್ಥೆ ಸರಿಯಾಗಿದೆ. ಆದರೆ, ಕೇವಲ 2 ಸ್ನಾನ ಗೃಹ ಮತ್ತು 2 ಶೌಚಾಲಯ ಇರುವ ಕಾರಣ ತೊಂದರೆಯಾಗುತ್ತಿದೆ. ಕಟ್ಟಡ ಚಿಕ್ಕದಾಗಿರುವುದರಿಂದ ಎಲ್ಲರೂ ಒಟ್ಟಾಗಿ ಕುಳಿತುಕೊಂಡು ಊಟ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT